Posts

ಬಡಗಿನ ಅನುಭವೀ ಕಲಾವಿದ, ಸಂಘಟಕ - ಶ್ರೀ ಸುಬ್ರಹ್ಮಣ್ಯ ಚಿಟ್ಟಾಣಿ 

Image
ಶ್ರೀ ಸುಬ್ರಹ್ಮಣ್ಯ ಚಿಟ್ಟಾಣಿ ಅವರು ಬಡಗು ತಿಟ್ಟಿನ ಅನುಭವೀ ಹಿರಿಯ  ಕಲಾವಿದರು. ಯಕ್ಷಗಾನ ಕ್ಷೇತ್ರದಲ್ಲಿ ಕಲಾವಿದನಾಗಿ ಇವರು ಸುಮಾರು ನಲುವತ್ತೈದು ವರ್ಷಗಳ ಅನುಭವವನ್ನು ಹೊಂದಿರುತ್ತಾರೆ. ಗುಂಡಬಾಳಾ, ಪೆರ್ಡೂರು, ಸಾಲಿಗ್ರಾಮ, ಶಿರಸಿ, ಬಚ್ಚಗಾರು, ಮಂದಾರ್ತಿ ಮೇಳಗಳಲ್ಲಿ ವ್ಯವಸಾಯವನ್ನು ಮಾಡಿದ ಇವರು ಶ್ರೇಷ್ಠ ಸಂಘಟಕರಾಗಿಯೂ ಗುರುತಿಸಿಕೊಂಡಿದ್ದಾರೆ. 1998ನೇ ಇಸವಿಯಲ್ಲಿ ವೀರಾಂಜನೇಯ ಯಕ್ಷಗಾನ ಮಿತ್ರ ಮಂಡಳಿ ಬಂಗಾರಮಕ್ಕಿ ಎಂಬ ಕಲಾ ಸಂಘಟನೆಯನ್ನು ಸ್ಥಾಪಿಸಿರುತ್ತಾರೆ. ಈ ಸಂಘಟನೆಯಡಿ ದಕ್ಷಿಣೋತ್ತರ ಜಿಲ್ಲೆಗಳಲ್ಲಿ, ಮುಂಬಯಿ, ಬೆಂಗಳೂರು, ಹೈದರಾಬಾದ್ ಮೊದಲಾದ ನಗರಗಳಲ್ಲಿ ಯಕ್ಷಗಾನ ಪ್ರದರ್ಶನಗಳನ್ನು ಏರ್ಪಡಿಸುತ್ತಾ ಬಂದಿರುತ್ತಾರೆ. ಈ ಸಂಸ್ಥೆಯ ನಾಯಕನಾಗಿ ವಿದೇಶ ಯಾತ್ರೆಯನ್ನು ಕೈಗೊಂಡು ಬಹರೇನ್ ನಲ್ಲಿ  ಪ್ರದರ್ಶನಗಳಲ್ಲೂ ಭಾಗವಹಿಸಿರುತ್ತಾರೆ. ಶ್ರೀಯುತರು ಬಡಗುತಿಟ್ಟಿನ ಖ್ಯಾತ ಕಲಾವಿದರಾಗಿ ಮೆರೆದ ಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರ ಸುಪುತ್ರರು.  ಶ್ರೀ ಸುಬ್ರಹ್ಮಣ್ಯ ಚಿಟ್ಟಾಣಿ ಅವರ ಹುಟ್ಟೂರು ಹೊನ್ನಾವರ ತಾಲೂಕಿನ ಹೊಸಾಕುಳಿ ಗ್ರಾಮದ ಚಿಟ್ಟಾಣಿ ಕೇರಿ. ಪ್ರಸ್ತುತ ಇವರು ನಗರ ಬಸ್ತಿಕೇರಿ ಗ್ರಾಮದ ಮೊಗೆಹಳ್ಳ ಎಂಬಲ್ಲಿ ವಾಸವಾಗಿದ್ದಾರೆ. 1962ನೇ ಇಸವಿ ಮಾರ್ಚ್ 25ರಂದು ಚಿಟ್ಟಾಣಿ ಶ್ರೀ ರಾಮಚಂದ್ರ ಹೆಗಡೆ ಮತ್ತು ಶ್ರೀಮತಿ ಸುಶೀಲಾ ಅಮ್ಮ ದಂಪತಿಗಳ ಪುತ್ರನಾಗಿ ಜನನ. ಚಿಟ್ಟಾಣಿ ಅವರ ಮೂವರು ಪುತ್ರರಲ್ಲಿ ಇವರೇ ಹಿರಿಯರು.

ನಾಟಕ ಕಲಾವಿದ ಯಕ್ಷಗಾನ ಕಲಾವಿದನಾದ ಬಗೆ - ಶ್ರೀ ಚಿದಂಬರ ಬಾಬು ಕೋಣಂದೂರು

Image
 ಶ್ರೀ ಚಿದಂಬರ ಬಾಬು ಕೋಣಂದೂರು ಅವರು ತೆಂಕುತಿಟ್ಟಿನ ಹಿರಿಯ ಅನುಭವೀ ಕಲಾವಿದರು. ಯಕ್ಷಗಾನ ಕಲಾಕ್ಷೇತ್ರದಲ್ಲಿ ಇವರು ನಾಲ್ಕು ದಶಕಗಳ ಅನುಭವಿ. ಕಳೆದ 42 ವರ್ಷಗಳಿಂದ ವ್ಯವಸಾಯ ಮಾಡುತ್ತಿದ್ದಾರೆ. ಮೂವತ್ತೈದು ವರ್ಷಗಳ ಕಾಲ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ಯಕ್ಷಗಾನ ಮಂಡಳಿಯಲ್ಲಿ ತಿರುಗಾಟ ನಡೆಸಿದವರು. ಕಳೆದ ಆರು ವರ್ಷಗಳಿಂದ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯಲ್ಲಿ ವ್ಯವಸಾಯ ಮಾಡುತ್ತಿದ್ದಾರೆ. ಬಾಲ್ಯದಲ್ಲಿ ಇವರು ನಾಟಕ ಕಲೆಯಲ್ಲಿ ಆಸಕ್ತಿಯನ್ನು ಹೊಂದಿದ್ದರು. ನಾಟಕಗಳಲ್ಲಿ ಅಭಿನಯಿಸುತ್ತಾ ತಬಲಾ ವಾದನವನ್ನು ಕಲಿತು ತೊಡಗಿಸಿಕೊಂಡಿದ್ದರು. ಪುರಾಣ ಪ್ರಸಂಗಗಳ ಜತೆಗೆ ತುಳು ಪ್ರಸಂಗಗಳಲ್ಲೂ ವೇಷಗಳನ್ನು ನಿರ್ವಹಿಸಿದ ಅನುಭವಿ ಇವರು. ಕಿರೀಟ ಮತ್ತು ನಾಟಕೀಯ ವೇಷಗಳಲ್ಲಿ ಪ್ರಸ್ತುತ ಕಾಣಿಸಿಕೊಂಡು ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಪ್ರಸಂಗದ 'ಅಣ್ಣಪ್ಪ' ಪಾತ್ರವನ್ನು ಕಳೆದ ಆರು ವರ್ಷಗಳಿಂದ ಇವರೇ ನಿರ್ವಹಿಸುತ್ತಿದ್ದಾರೆ.  ಶ್ರೀ ಧರ್ಮಸ್ಥಳ ಮೇಳದ ಕಲಾವಿದ  ಶ್ರೀ ಚಿದಂಬರ ಬಾಬು ಕೋಣಂದೂರು ಅವರ ಹುಟ್ಟೂರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅತಲಾಪುರ ಗ್ರಾಮದ ಕೋಣಂದೂರು ಸಮೀಪದ ಹಿತ್ತಲಸರ. 1961ನೇ ಇಸವಿ ಏಪ್ರಿಲ್ 23ರಂದು ಶ್ರೀ ನಾಗೇಶ್ ಮತ್ತು ಶ್ರೀಮತಿ ರತ್ನಮ್ಮ ದಂಪತಿಗಳ ಪುತ್ರನಾಗಿ ಜನನ. ಇವರದ್ದು ಕೃಷಿ ಕುಟುಂಬ. ಮನೆಯವರೆಲ್ಲ ಕೃಷಿಯಲ

ಅನುಭವೀ ಮದ್ದಳೆಗಾರರು, ಯಕ್ಷಗಾನ ವಾದ್ಯೋಪಕರಣಗಳ ತಯಾರಕರು - ಶ್ರೀ ಶೇಣಿ ಸುಬ್ರಹ್ಮಣ್ಯ ಭಟ್

Image
 ಶ್ರೀ ಶೇಣಿ ಸುಬ್ರಹ್ಮಣ್ಯ ಭಟ್ಟರು ತೆಂಕುತಿಟ್ಟು ಯಕ್ಷಗಾನದ ಹಿರಿಯ ಮದ್ದಳೆಗಾರರು. ಕಲಾಕ್ಷೇತ್ರದಲ್ಲಿ ಶ್ರೀಯುತರು ಸುಮಾರು ನಾಲ್ಕೂವರೆ ದಶಕಗಳ ಅನುಭವಿ. ವೇಷಧಾರಿಯಾಗಿ ಯಕ್ಷಗಾನ ಕ್ಷೇತ್ರವನ್ನು ಪ್ರವೇಶಿಸಿದ ಇವರು ಬಳಿಕ ಮದ್ದಳೆಗಾರನಾಗಿ ಕಾಣಿಸಿಕೊಂಡು ಪ್ರಸಿದ್ಧರಾದರು. ಉಪ್ಪಳ, ಕಟೀಲು, ಸುಂಕದಕಟ್ಟೆ, ಸುರತ್ಕಲ್, ಮಧೂರು, ಮಲ್ಲ ಮತ್ತು ಧರ್ಮಸ್ಥಳ ಮೇಳಗಳಲ್ಲಿ ವ್ಯವಸಾಯವನ್ನು ಮಾಡಿ ಅನುಭವವನ್ನು ಗಳಿಸಿಕೊಂಡವರು. ತೆಂಕುತಿಟ್ಟಿನ ಹೆಚ್ಚಿನ ಹಿರಿಯ ಭಾಗವತರುಗಳ ಹಾಡುಗಾರಿಕೆಗೆ ಚೆಂಡೆ ಮದ್ದಲೆಗಳನ್ನು ನುಡಿಸುವ ಅವಕಾಶವು ಇವರಿಗೆ ದೊರೆತಿತ್ತು. ಯಕ್ಷಗಾನ ಕಲೆಯ ವಾದ್ಯೋಪಕರಣಗಳಾದ ಚೆಂಡೆ ಮತ್ತು ಮದ್ದಳೆಗಳ ನುಡಿಸುವಿಕೆಯಲ್ಲಿ ಇವರು ಪರಿಣತರು. ಈ ವಾದ್ಯೋಪಕರಣಗಳನ್ನು ತಯಾರಿಸುವ ಕಲೆಯೂ ಇವರಿಗೆ ಕರಗತ. ಹೊಸ ಚೆಂಡೆ ಮತ್ತು ಮದ್ದಲೆಗಳನ್ನು ತಯಾರಿಸಿ ಪ್ರದರ್ಶನಕ್ಕಾಗಿ ಒದಗಿಸಿ ಕೊಡುತ್ತಾರೆ. ಹಳತನ್ನು ದುರಸ್ಥಿಗೊಳಿಸಿ ಕೊಡುತ್ತಾರೆ. ಚೆಂಡೆಯ ಕೋಲುಗಳನ್ನು ಬೇಕಾದಂತೆ ಸಿದ್ಧಗೊಳಿಸಿ ಕೊಡುತ್ತಾರೆ. ಇವರು ಸಿದ್ಧಗೊಳಿಸಿದ ಚೆಂಡೆ, ಮದ್ದಳೆ, ಚೆಂಡೆಯ ಕೋಲುಗಳು ಪ್ರದರ್ಶನಗಳಲ್ಲಿ ಬಳಕೆಯಾಗುವುದನ್ನು ನಾವು ಗಮನಿಸಬಹುದು. ಈ ವಿಭಾಗದಲ್ಲಿ  ಶ್ರೀ ಶೇಣಿ ಸುಬ್ರಹ್ಮಣ್ಯ ಭಟ್ಟರ ಬಿಡುವಿಲ್ಲದ ದುಡಿಮೆಯು ಪ್ರಶಂಸನೀಯವಾದುದು. 1996ರಲ್ಲಿ ಮೇಳದ ವ್ಯವಸಾಯಕ್ಕೆ ವಿದಾಯ ಹೇಳಿದ ಬಳಿಕ ಯಕ್ಷಗಾನ ಹಿಮ್ಮೇಳ ಪರಿಕರಗಳ ತಯಾರಿಕೆಯಲ್ಲಿ ಪರಿಪೂರ್ಣವಾಗ

ಉಂಡೆಮನೆ ಶ್ರೀಕೃಷ್ಣ ಭಟ್  - ಬಹುಮುಖ ಪ್ರತಿಭೆಯ ಯಕ್ಷತಾರೆ

Image
 ಶ್ರೀ ಉಂಡೆಮನೆ ಶ್ರೀಕೃಷ್ಣ ಭಟ್ಟರು ಬಹುಮುಖ ಪ್ರತಿಭೆಯ ಯಕ್ಷಗಾನ ಕಲಾವಿದರು. ಇವರು ಯಕ್ಷಗಾನದ ಎಲ್ಲಾ ಅಂಗಗಳನ್ನೂ ಬಲ್ಲವರು. ಭಾಗವತರಾಗಿ, ವೇಷಧಾರಿಯಾಗಿ ಗುರುತಿಸಿಕೊಂಡರೂ ಅಗತ್ಯ ಬಿದ್ದರೆ ಚೆಂಡೆ ಮದ್ದಳೆಗಳನ್ನೂ ನುಡಿಸಬಲ್ಲರು. ಅರ್ಥಧಾರಿಯಾಗಿ ತಾಳಮದ್ದಳೆ ಕ್ಷೇತ್ರದಲ್ಲೂ ತೊಡಗಿಸಿಕೊಂಡ ಅನುಭವಿ ಇವರು. ಯಕ್ಷಗಾನ ಗುರುವಾಗಿ ತಾನು ಕಲಿತ ವಿದ್ಯೆಯನ್ನು ಕಲಿಕಾಸಕ್ತರಿಗೆ ಹೇಳಿಕೊಟ್ಟಿದ್ದಾರೆ. ಇವರಿಂದ ಕಲಿತ ಅನೇಕರು ಇಂದು ಮೇಳಗಳಲ್ಲಿ ವ್ಯವಸಾಯ ಮಾಡುತ್ತಿರುವುದನ್ನು ನಾವು ಕಾಣಬಹುದು. ಕರ್ನಾಟಕ ಸಂಗೀತದ ಜ್ಞಾನವನ್ನು ಹೊಂದಿದ ಇವರು ಭಾಗವತರಾಗಿಯೂ ಕಾಣಿಸಿಕೊಂಡಿದ್ದಾರೆ. ಒಳ್ಳೆಯ ಸ್ವರಭಾರವನ್ನು ಹೊಂದಿದ ಇವರು ಇಳಿ ಶೃತಿಯಲ್ಲೂ, ಏರು ಶೃತಿಯಲ್ಲೂ ಸಮಾನವಾಗಿ ಹಾಡಬಲ್ಲರು. ಮೀನಾಕ್ಷಿ ಕಲ್ಯಾಣ ಎಂಬ ಪ್ರಸಂಗದಲ್ಲಿ ಇವರು ಹಾಡಿದ "ಗೆಲುವನೆಂಬುತ್ಸಾಹದಿ ಬರಲು ದೂರದಿ ..." ಎಂಬ ಹಾಡು ಸಾಮಾಜಿಕ ಜಾಲತಾಣದಲ್ಲಿ ಒಳ್ಳೆಯ ಪ್ರಚಾರವನ್ನು ಪಡೆದಿತ್ತು. ಅವರು ಹಾಡಿದ ಈ ಹಾಡನ್ನು ಕೆಲವರು ತಮ್ಮ ಮೊಬೈಲ್ ನ ರಿಂಗ್ ಟೋನ್ ಆಗಿಯೂ ಬಳಸಿಕೊಂಡಿದ್ದರು. ದಂಡಯಾತ್ರೆಯನ್ನು ಕೈಗೊಂಡ ಮೀನಾಕ್ಷಿಯು ಕೈಲಾಸಪರ್ವತವನ್ನು ಕಂಡು ಹೊಗಳುತ್ತಿರುವ ಹಾಡು ಇದು.  ಉಂಡೆಮನೆ ಶ್ರೀಕೃಷ್ಣ ಭಟ್ಟರು ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು ನಲುವತ್ತು ವರ್ಷಗಳ ಅನುಭವಿ.  ಉಂಡೆಮನೆ ಎಂಬುದು ಕಾಸರಗೋಡು ತಾಲೂಕಿನ ಪೆರಡಾಲ ಗ್ರಾಮದ ಒಂದು ಹಳ್ಳಿ. ಕುಂಬಳೆ ಸೀಮ

ಶ್ರೀ ನಾಗೇಂದ್ರ ಮೂರೂರು - ಯುವ ಅನುಭವೀ ಕಲಾವಿದ, ಹಾಸ್ಯಗಾರ

Image
ಶ್ರೀ ನಾಗೇಂದ್ರ ಮೂರೂರು ಅವರು ಬಡಗುತಿಟ್ಟಿನ ಯುವ, ಅನುಭವೀ ಕಲಾವಿದರು. ಪ್ರಸ್ತುತ ಹಾಸ್ಯಗಾರರಾಗಿ ಯಕ್ಷಗಾನ ಕ್ಷೇತ್ರದಲ್ಲಿ ವ್ಯವಸಾಯ ಮಾಡುತ್ತಿದ್ದಾರೆ. ಹಾಸ್ಯಗಾರನಾದರೂ ಇವರು ಎಲ್ಲಾ ರೀತಿಯ ಪಾತ್ರಗಳನ್ನೂ ಮಾಡಬಲ್ಲ ಸಾಮರ್ಥ್ಯ ಉಳ್ಳವರು. ಆದುದರಿಂದ ತಂಡಕ್ಕೆ ಅನಿವಾರ್ಯ ಸಂದರ್ಭಗಳಲ್ಲಿ ಇವರು ಆಪದ್ಬಾಂಧವರಾಗಿ ಒದಗಬಲ್ಲವರು. ಇವರಲ್ಲಿರುವ ಹಾಸ್ಯಪ್ರಜ್ಞೆಯನ್ನು ಗುರುತಿಸಿ ಹಾಸ್ಯ ಪಾತ್ರಗಳನ್ನು ನಿರ್ವಹಿಸಲು ಪ್ರೇರಣೆ ನೀಡಿ ಅವಕಾಶ ನೀಡಿದವರು ಕೊಂಡದಕುಳಿ ಶ್ರೀ ರಾಮಚಂದ್ರ ಹೆಗಡೆಯವರು. 'ಪೂರ್ಣಚಂದ್ರ ಯಕ್ಷಕಲಾ ಪ್ರತಿಷ್ಠಾನ' ತಂಡದ ಸದಸ್ಯನಾಗಿ ವೇಷಗಳನ್ನು ಮಾಡುತ್ತಿದ್ದಾಗ ಪ್ರೇಕ್ಷಕರು ಇವರಲ್ಲಿರುವ ಪ್ರತಿಭೆಯನ್ನು ಗುರುತಿಸಿದ್ದರು. ಗುಂಡಬಾಳಾ ಮೇಳ,  ಕೊಂಡದಕುಳಿ ಶ್ರೀ ರಾಮಚಂದ್ರ ಹೆಗಡೆಯವರ 'ಪೂರ್ಣಚಂದ್ರ ಯಕ್ಷಕಲಾ ಪ್ರತಿಷ್ಠಾನ' ಕುಂಭಾಶಿ, ಶ್ರೀ ಸುಬ್ರಹ್ಮಣ್ಯ ಚಿಟ್ಟಾಣಿಯವರ ವೀರಾಂಜನೇಯ ಯಕ್ಷಮಿತ್ರ ಮಂಡಳಿ, ಶ್ರೀ ಬಳ್ಕೂರು ಕೃಷ್ಣಯಾಜಿ ಅವರ  ಯಾಜಿ ಯಕ್ಷಮಿತ್ರ ಮಂಡಳಿ, ಇಟಗಿ ಶ್ರೀ ಮಹಾಬಲೇಶ್ವರ ಭಟ್ ಅವರ ಕಲಾಭಾಸ್ಕರ ಮೊದಲಾದ ತಂಡಗಳಲ್ಲಿ ವ್ಯವಸಾಯ ಮಾಡಿದ ಅನುಭವಿ ಇವರು. ಅನಿವಾರ್ಯ ಸಂದರ್ಭಗಳಲ್ಲಿ ಸಾಲಿಗ್ರಾಮ ಮೇಳದಲ್ಲಿ ವೇಷ ಮಾಡಿದ್ದೂ ಇದೆ. ಯಕ್ಷಗಾನ ಕ್ಷೇತ್ರದಲ್ಲಿ ಇವರು  ಸುಮಾರು ಮೂವತ್ತು ವರ್ಷಗಳ ಅನುಭವಿ.  ಬಡಗುತಿಟ್ಟಿನ ಅನುಭವೀ ಹಾಸ್ಯಗಾರರಾದ  ಶ್ರೀ ನಾಗೇಂದ್ರ ಅವರ ಹುಟ್ಟೂರು ಉತ್ತರ ಕನ್ನಡ

ಶ್ರೀ ಪ್ರಭಾಕರ ಭಂಡಾರಿ, ಶ್ರೀ ಮಂಜುನಾಥ ಭಂಡಾರಿ, ಶ್ರೀ ಪರಮೇಶ್ವರ ಭಂಡಾರಿ ಕರ್ಕಿ - ಬಡಗುತಿಟ್ಟಿನ ಮದ್ದಳೆವಾದನದಲ್ಲಿ ಕರ್ಕಿ ಮನೆತನ

Image
ಉತ್ತರ ಕನ್ನಡ ಜಿಲ್ಲೆಯ ಕರ್ಕಿ ಎಂಬ ಊರು ಯಕ್ಷಗಾನ ಕಳೆಯ ಆಡೊಂಬಲ ಎಂದರೂ ತಪ್ಪಾಗಲಾರದು. . ಬಡಗುತಿಟ್ಟಿನ ಹಿಮ್ಮೇಳ, ಮುಮ್ಮೇಳದ ಅನೇಕ ಕಲಾವಿದರನ್ನು ಯಕ್ಷಗಾನ ಕಲಾ ಮಾತೆಯ ಮಡಿಲಿಗಿಕ್ಕಿದ ಮಣ್ಣು ಇದು. ಇಲ್ಲಿ ಹುಟ್ಟಿ ಬೆಳೆದ ಕಲಾವಿದರೆಲ್ಲಾ ತಾವು ತೊಡಗಿಸಿಕೊಂಡ ವಿಭಾಗದಲ್ಲಿ ಖ್ಯಾತರಾಗಿ ಕಲಾಭಿಮಾನಿಗಳನ್ನು ರಂಜಿಸಿದ್ದಾರೆ. ಕರ್ಕಿ ಹಾಸ್ಯಗಾರ ಮನೆತನದಲ್ಲಿ ಜನಿಸಿದ ಅನೇಕರು ಬಡಗುತಿಟ್ಟಿನ ಮುಮ್ಮೇಳದ ಕಲಾವಿದರಾಗಿ ಖ್ಯಾತರಾದುದು ನಮಗೆಲ್ಲಾ ತಿಳಿದ ವಿಚಾರ. ಬಡಗುತಿಟ್ಟಿನ ಯಕ್ಷಗಾನ ಹಿಮ್ಮೇಳಕ್ಕೂ ಕರ್ಕಿ ಮಣ್ಣಿನ ಕೊಡುಗೆಯು ಅಪಾರ. ಕರ್ಕಿ ಭಂಡಾರಿ ಮನೆತನದಲ್ಲಿ ಜನಿಸಿದ ಅನೇಕರು ಅತ್ಯುತ್ತಮ ಮದ್ದಳೆವಾದಕರಾಗಿ ಯಕ್ಷಗಾನ ಕ್ಷೇತ್ರದಲ್ಲಿ ವ್ಯವಸಾಯ ಮಾಡುತ್ತಾ ಖ್ಯಾತರಾಗಿದ್ದಾರೆ. ಇವರಲ್ಲಿ ಶ್ರೀ ಪ್ರಭಾಕರ ಭಂಡಾರಿ ಕರ್ಕಿ, ಶ್ರೀ ಮಂಜುನಾಥ ಭಂಡಾರಿ ಕರ್ಕಿ ಮತ್ತು ಶ್ರೀ ಪರಮೇಶ್ವರ ಭಂಡಾರಿ ಕರ್ಕಿ ಪ್ರಮುಖರು. ಬಡಗುತಿಟ್ಟಿನ  ಹಿರಿಯ,ಅನುಭವೀ, ಖ್ಯಾತ ಮದ್ದಳೆಗಾರ ಶ್ರೀ ಪ್ರಭಾಕರ ಭಂಡಾರಿ ಕರ್ಕಿ ಅವರಿಗೀಗ 82 ವರ್ಷ ವಯಸ್ಸು. ಕಳೆದ 20 ವರ್ಷಗಳಿಂದ ಯಕ್ಷಗಾನ ಕಲಾ ವ್ಯವಸಾಯಕ್ಕೆ ವಿದಾಯ ಹೇಳಿ ಮಕ್ಕಳಾದ ಶ್ರೀ ಮಂಜುನಾಥ ಭಂಡಾರಿ ಕರ್ಕಿ ಮತ್ತು ಶ್ರೀ ಪರಮೇಶ್ವರ ಭಂಡಾರಿ ಕರ್ಕಿ ಇವರೊಂದಿಗೆ ವಿಶ್ರಾಂತ ಜೀವನವನ್ನು ನಡೆಸುತ್ತಿದ್ದಾರೆ.  ಶ್ರೀ ಪ್ರಭಾಕರ ಭಂಡಾರಿ ಕರ್ಕಿ ಬಡಗುತಿಟ್ಟಿನ ಹಿರಿಯ ಅನುಭವೀ ಮದ್ದಳೆಗಾರರಾದ ಶ್ರೀ ಪ್ರಭಾಕರ ಭಂಡಾರಿ ಅವರ

ಅಸುರ ಪಾತ್ರಗಳಲ್ಲಿ ಅಬ್ಬರಿಸಿದ ಅಪ್ರತಿಮ ಕಲಾಕಾರ ಶ್ರೀ ಸಂಜೀವ ಚೌಟ, ಉದ್ಯಾವರ ಮಾಡ

Image
ಅನುಭವಗಳನ್ನು ಗಳಿಸಿ ಹಂತ ಹಂತವಾಗಿ ಬೆಳೆದು ಮುಂಭಡ್ತಿಗೊಂಡು ಸ್ಥಾನಗಳನ್ನು ಪಡೆಯುವುದು ಎಲ್ಲಾ ಕ್ಷೇತ್ರಗಳಲ್ಲಿ ನಡೆಯುವ ಸಹಜವಾದ ಕ್ರಿಯೆಯು. ಕೆಳಸ್ಥರಗಳಲ್ಲಿ ಪಡೆದ ಅನುಭವಗಳೇ ಮುಂದೆ ಎದುರಾಗುವ ಸವಾಲುಗಳನ್ನು ಎದುರಿಸಲು ಸಹಾಯ ಮಾಡುತ್ತದೆ ಎಂಬುದರಿಂದ ಈ ವ್ಯವಸ್ಥೆಯು ಸರಿಯಾದುದೇ ಆಗಿದೆ. ಯಕ್ಷಗಾನದಲ್ಲೂ ಇದೇ ರೀತಿಯ ನಿಯಮಗಳಿತ್ತು ಎಂಬುದನ್ನು ನಾವು ಕೇಳಿರುತ್ತೇವೆ. ಪೂರ್ವರಂಗ, ಸ್ತ್ರೀವೇಷ, ಪುಂಡುವೇಷ, ಪೀಠಿಕೆವೇಷ ಎದುರು ವೇಷ ಎಂಬ ಹಂತಗಳನ್ನು ದಾಟಿ ಬಂದವರು ಬಣ್ಣದ ವೇಷಧಾರಿಯಾಗುತ್ತಾರೆ. ಬಣ್ಣದ ವೇಷಗಳನ್ನು ನಿರ್ವಹಿಸಿ ಯಶಸ್ವಿಯಾದ ಮೇಲೆ ಅವರಿಗೆ ಹಾಸ್ಯಗಾರ ಸ್ಥಾನವು ದೊರಕುತ್ತಿತ್ತು. ಇದು ಪರಿವರ್ತನಾಶೀಲವಾದ ಪ್ರಪಂಚ. ಎಲ್ಲ ಕ್ಷೇತ್ರಗಳಲ್ಲೂ ಬದಲಾವಣೆಯನ್ನು ಕಾಣಬಹುದು. ದೇಶ, ಕಾಲಕ್ಕೆ ತಕ್ಕಂತಹ ಬದಲಾವಣೆಯನ್ನು ನಾವು ಆಕ್ಷೇಪಿಸದೆ ಸ್ವಾಗತಿಸಲೇಬೇಕಾಗುತ್ತದೆ. ಇಂದು ಯಕ್ಷಗಾನದಲ್ಲಿ ಕಲಾವಿದರಿಗೆ ಅವರವರ ಆಸಕ್ತಿಯನ್ನು ಹೊಂದಿ ಆಯ್ಕೆಗೆ ಅವಕಾಶಗಳಿವೆ. ಏನೇ ಇರಲಿ, ಕಲಾವಿದನು ಸ್ಥಾನವನ್ನು ಹೇಗೆ ಗಿಟ್ಟಿಸಿಕೊಂಡ ಎಂಬುದು ಮುಖ್ಯವಲ್ಲ. ನಾವು ಧರಿಸಿದ ಪಾತ್ರಕ್ಕೆ, ಕಲೆಗೆ ಅಪಚಾರವಾಗದಂತೆ ಅಭಿನಯಿಸುವ ಕಲೆಯನ್ನು ಹೊಂದಿರುವುದು ಮುಖ್ಯ. ಯಕ್ಷಗಾನ ಎಂಬ ಮೇರು ಕಲೆಗೆ ಯಾವತ್ತೂ ಕೊರತೆಯಾಗಬಾರದು ಎಂಬ ಎಚ್ಚರದಿಂದ ಪಾತ್ರಗಳನ್ನು ನಿರ್ವಹಿಸಿದರೆ ಆತ ಕಲಾವಿದನಾಗಿ ಯಶಸ್ವಿಯಾಗುತ್ತಾನೆ. ಹಿಂದಿನ ಕಾಲದಲ್ಲಿ ಅನೇಕರು ಹಂತಹಂತವಾಗಿ ಬೆಳೆದೇ