Posts

Showing posts from November, 2022

ಅಸುರ ಪಾತ್ರಗಳಲ್ಲಿ ಅಬ್ಬರಿಸಿದ ಅಪ್ರತಿಮ ಕಲಾಕಾರ ಶ್ರೀ ಸಂಜೀವ ಚೌಟ, ಉದ್ಯಾವರ ಮಾಡ

Image
ಅನುಭವಗಳನ್ನು ಗಳಿಸಿ ಹಂತ ಹಂತವಾಗಿ ಬೆಳೆದು ಮುಂಭಡ್ತಿಗೊಂಡು ಸ್ಥಾನಗಳನ್ನು ಪಡೆಯುವುದು ಎಲ್ಲಾ ಕ್ಷೇತ್ರಗಳಲ್ಲಿ ನಡೆಯುವ ಸಹಜವಾದ ಕ್ರಿಯೆಯು. ಕೆಳಸ್ಥರಗಳಲ್ಲಿ ಪಡೆದ ಅನುಭವಗಳೇ ಮುಂದೆ ಎದುರಾಗುವ ಸವಾಲುಗಳನ್ನು ಎದುರಿಸಲು ಸಹಾಯ ಮಾಡುತ್ತದೆ ಎಂಬುದರಿಂದ ಈ ವ್ಯವಸ್ಥೆಯು ಸರಿಯಾದುದೇ ಆಗಿದೆ. ಯಕ್ಷಗಾನದಲ್ಲೂ ಇದೇ ರೀತಿಯ ನಿಯಮಗಳಿತ್ತು ಎಂಬುದನ್ನು ನಾವು ಕೇಳಿರುತ್ತೇವೆ. ಪೂರ್ವರಂಗ, ಸ್ತ್ರೀವೇಷ, ಪುಂಡುವೇಷ, ಪೀಠಿಕೆವೇಷ ಎದುರು ವೇಷ ಎಂಬ ಹಂತಗಳನ್ನು ದಾಟಿ ಬಂದವರು ಬಣ್ಣದ ವೇಷಧಾರಿಯಾಗುತ್ತಾರೆ. ಬಣ್ಣದ ವೇಷಗಳನ್ನು ನಿರ್ವಹಿಸಿ ಯಶಸ್ವಿಯಾದ ಮೇಲೆ ಅವರಿಗೆ ಹಾಸ್ಯಗಾರ ಸ್ಥಾನವು ದೊರಕುತ್ತಿತ್ತು. ಇದು ಪರಿವರ್ತನಾಶೀಲವಾದ ಪ್ರಪಂಚ. ಎಲ್ಲ ಕ್ಷೇತ್ರಗಳಲ್ಲೂ ಬದಲಾವಣೆಯನ್ನು ಕಾಣಬಹುದು. ದೇಶ, ಕಾಲಕ್ಕೆ ತಕ್ಕಂತಹ ಬದಲಾವಣೆಯನ್ನು ನಾವು ಆಕ್ಷೇಪಿಸದೆ ಸ್ವಾಗತಿಸಲೇಬೇಕಾಗುತ್ತದೆ. ಇಂದು ಯಕ್ಷಗಾನದಲ್ಲಿ ಕಲಾವಿದರಿಗೆ ಅವರವರ ಆಸಕ್ತಿಯನ್ನು ಹೊಂದಿ ಆಯ್ಕೆಗೆ ಅವಕಾಶಗಳಿವೆ. ಏನೇ ಇರಲಿ, ಕಲಾವಿದನು ಸ್ಥಾನವನ್ನು ಹೇಗೆ ಗಿಟ್ಟಿಸಿಕೊಂಡ ಎಂಬುದು ಮುಖ್ಯವಲ್ಲ. ನಾವು ಧರಿಸಿದ ಪಾತ್ರಕ್ಕೆ, ಕಲೆಗೆ ಅಪಚಾರವಾಗದಂತೆ ಅಭಿನಯಿಸುವ ಕಲೆಯನ್ನು ಹೊಂದಿರುವುದು ಮುಖ್ಯ. ಯಕ್ಷಗಾನ ಎಂಬ ಮೇರು ಕಲೆಗೆ ಯಾವತ್ತೂ ಕೊರತೆಯಾಗಬಾರದು ಎಂಬ ಎಚ್ಚರದಿಂದ ಪಾತ್ರಗಳನ್ನು ನಿರ್ವಹಿಸಿದರೆ ಆತ ಕಲಾವಿದನಾಗಿ ಯಶಸ್ವಿಯಾಗುತ್ತಾನೆ. ಹಿಂದಿನ ಕಾಲದಲ್ಲಿ ಅನೇಕರು ಹಂತಹಂತವಾಗಿ ಬೆಳೆದೇ

ಅನುಭವಿ ಸಹೃದಯಿ ಭಾಗವತ ಶ್ರೀನಿವಾಸ ಬಳ್ಳಮಂಜ

Image
  ಫೋಟೋ ಕೃಪೆ: ಶ್ರೀ ಮಧುಸೂದನ ಅಲೆವೂರಾಯ  ಶ್ರೀ ಶ್ರೀನಿವಾಸ ಬಳ್ಳಮಂಜ ಅವರು ಕಟೀಲು ಮೇಳದ ಭಾಗವತರು. ಪ್ರಸ್ತುತ ಕಟೀಲು ನಾಲ್ಕನೇ ಮೇಳದಲ್ಲಿ ಪ್ರಧಾನ ಭಾಗವತರಾಗಿ ಕಲಾಸೇವೆಯನ್ನು ಮಾಡುತ್ತಿದ್ದಾರೆ. ಯಕ್ಷಗಾನದಲ್ಲಿ ಭಾಗವತ ಸ್ಥಾನದ ಹೊಣೆಗಾರಿಕೆಯು ವಿಶಾಲವಾದುದು. ನಾಲ್ಕಾರು ಪದ್ಯಗಳನ್ನು ಹೇಳಿದವರು ಭಾಗವತರಾಗಲಾರರು. ಯಶಸ್ವಿ ಪ್ರದರ್ಶನಕ್ಕೆ ಬೇಕಾದ ಅಂಶಗಳನ್ನೆಲ್ಲಾ ಅವನು ತಿಳಿದಿರಬೇಕು. ತೆಂಕು ತಿಟ್ಟಿನ ಹಿರಿಯ ಭಾಗವತರಾದ ಕುರಿಯ ಶ್ರೀ ಗಣಪತಿ ಶಾಸ್ತ್ರಿಗಳು ಪ್ರದರ್ಶನ ಮುಗಿದ ಮೇಲೆ ಆಟ ಹೇಗಾಗಿದೆ? ಎಂದು ಕೇಳುತ್ತಿದ್ದರು. ಪ್ರದರ್ಶನವು ಚೆನ್ನಾಗಿರಬೇಕೆಂಬ ತುಡಿತವು ಅವರಿಗಿತ್ತು. ಕಲಾವಿದರು ನಿಮ್ಮ ಪದ್ಯ ಚೆನ್ನಾಗಿತ್ತು ಎಂದು ಹೇಳಿದರೆ, 'ನೀವು ಚೆನ್ನಾಗಿ ದುಡಿದಿರಿ,ಆದ ಕಾರಣ ನನ್ನ ಪದ್ಯ ಒಳ್ಳೆಯದಾಯಿತು" ಎಂದು ಹೇಳುತ್ತಿದ್ದರು. ಯಕ್ಷಗಾನವು ಸ್ವಪ್ರತಿಷ್ಠೆಗಾಗಿ ಇರುವ ವೇದಿಕೆಯಲ್ಲ, ಕಲಾವಿದರು ತಂಡವಾಗಿ ಮುನ್ನಡೆದು ಪ್ರದರ್ಶನದ ಗೆಲುವಿಗೆ ಕಾರಣರಾಗಬೇಕು ಎಂಬ ಸಂದೇಶವು ಇದರಲ್ಲಿದೆ. "ಭಾಗವತನು ಯಶಸ್ವೀ ಪ್ರದರ್ಶನದ ಶ್ರೇಯಸ್ಸನ್ನು ಪಡೆಯುವುದರ ಜತೆಗೆ ಸೋಲಿನ ಹೊಣೆಯನ್ನೂ ಹೊರಬೇಕು. ಸೋಲಿಗಾಗಿ ಮತ್ತೊಬ್ಬರ ಕಡೆಗೆ ಬೆರಳು ತೋರಿಸಬಾರದು'' ಇದು ಉಭಯ ತಿಟ್ಟುಗಳ ಖ್ಯಾತ ಭಾಗವತ ಕೀರ್ತಿಶೇಷ ಕಡತೋಕಾ ಮಂಜುನಾಥ ಭಾಗವತರ ಮಾತುಗಳು. ಇದರಿಂದ ಯಕ್ಷಗಾನದಲ್ಲಿ ಭಾಗವತನ ಸ್ಥಾನ, ಹೊಣೆಗಳೇನು ಎಂಬುದನ್ನು ಅರ್ಥ ಮಾಡ

ಅನುಭವಿ ಕಲಾವಿದ ಶ್ರೀ ಮೋಹನ ಶೆಟ್ಟಿ ಬಾಯಾರು

Image
ಯಕ್ಷಗಾನವು ಶ್ರೇಷ್ಠ ಕಲೆ ಎಂಬ ಅರ್ಥದಲ್ಲಿ 'ಗಂಡುಕಲೆ' ಎಂದೇ ಪ್ರಸಿದ್ಧವಾಗಿದೆ. ಕಾಸರಗೋಡು, ,ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡ ಪ್ರದೇಶದಲ್ಲಿ ವಾಸಿಸುವ ಜನರಿಗೆ ಯಕ್ಷಗಾನದಿಂದ ದೂರವಾಗಿ ಬದುಕಲು ಸಾಧ್ಯವಿಲ್ಲ. ಈ  ಅನುಪಮವಾದ ಕಲೆಯ ಹೊರತಾದ ಬದುಕನ್ನು ಈ ಪ್ರದೇಶದ ಜನರಿಗೆ ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ಜೀವನವು ಯಕ್ಷಗಾನ ಕಲೆಯೊಂದಿಗೆ ಜತೆಯಾಗಿ ಮುನ್ನಡೆಯುತ್ತದೆ. ಎಲ್ಲಾ ಮನೆಗಳಲ್ಲೂ ಕಲಾವಿದರೋ, ಕಲಾಭಿಮಾನಿಗಳೋ ಇದ್ದೇ ಇರುತ್ತಾರೆ. ಇದು ನಮ್ಮ ಊರಿನ ಕಲೆ. ನಾವು ಈ ಶ್ರೇಷ್ಠ ಕಲೆಯ ಒಂದು ಅಂಗವಾಗಿ ಇದ್ದೇವೆ ಎಂದು ಹೆಮ್ಮೆಯಿಂದ, ಸಂತಸದಿಂದ ಹೇಳಿಕೊಳ್ಳುತ್ತಾರೆ. ಯಕ್ಷಗಾನ ಕಲಾವಿದನಾಗಬೇಕೆಂದು ಆಸೆ ಇರುವವರಿಗೆ ಅವರವರ ಅಭಿರುಚಿಗೆ ತಕ್ಕಂತೆ ಆಯ್ಕೆಗೆ ಅವಕಾಶಗಳಿವೆ. ಜೇನು, ಮೊಸರು, ಬೆಲ್ಲ, ಸಕ್ಕರೆ, ದ್ರಾಕ್ಷಿ ಮೊದಲಾದ ವಸ್ತುಗಳೆಲ್ಲಾ ಸವಿಯಾಗಿಯೇ ಇರುತ್ತದೆ. ಎಲ್ಲರೂ ಎಲ್ಲವನ್ನೂ ಇಷ್ಟ ಪಡಲಾರರು. ಯಾರ ಮನಸ್ಸಿಗೆ ಯಾವುದು ಮೆಚ್ಚುಗೆಯೋ ಅದೇ ಅವನಿಗೆ ಸವಿಯಾಗಿರುತ್ತದೆ. ರಂಗವೇರುವ ಅಭ್ಯಾಸಿಗಳಿಗೆ ಭಾಗವತನಾಗಬೇಕು, ಮದ್ದಳೆಗಾರನಾಗಬೇಕು, ಪುಂಡುವೇಷಧಾರಿಯಾಗಬೇಕು, ಸ್ತ್ರೀ ಪಾತ್ರಧಾರಿಯಾಗಬೇಕು ಹೀಗೆಂಬ ಗುರಿಯಿರುತ್ತದೆ. ಬೇಕಾದಂತೆ ಆಯ್ಕೆ ಮಾಡಿಕೊಂಡು ಮುಂದುವರಿಯುತ್ತಾರೆ. ಹೀಗೆ ತೊಡಗಿಸಿಕೊಂಡು ಅನುಭವಗಳಿಂದ ಪಕ್ವರಾದ ಹಿರಿಯ ಕಲಾವಿದರಲ್ಲಿ ಒಬ್ಬರು ಶ್ರೀ ಮೋಹನ ಶೆಟ್ಟಿ ಬಾಯಾರು. ಇವರು ಪ್ರಸ್ತುತ ಕಟೀಲು ಶ್ರೀ ದು

ಅನುಭವಿ ಬಣ್ಣದ ವೇಷಧಾರಿ - ಶ್ರೀ ಶಶಿಧರ ಶೆಟ್ಟಿ ಪಂಜ ಕೊಯಿಕುಡೆ

Image
  ತೆಂಕುತಿಟ್ಟು ಯಕ್ಷಗಾನದಲ್ಲಿ ಬಣ್ಣದ ವೇಷಗಳಿಗೆ ವಿಶೇಷ ಸ್ಥಾನ, ಗೌರವಗಳ ಜತೆ ಪ್ರದರ್ಶಿಸುವಲ್ಲಿ ತನ್ನದೇ ಆದ ರೀತಿ, ನಿಯಮಗಳೂ ಇವೆ. ಇದು ವೇಗದ ಯುಗ. ಪ್ರಸ್ತುತ ಬದಲಾದ ಸನ್ನಿವೇಶದಲ್ಲಿ ಬಣ್ಣದ ವೇಷಗಳಿಗೆ ಅವಕಾಶ, ಪ್ರೋತ್ಸಾಹಗಳು ಸರಿಯಾಗಿ ದೊರಕುತ್ತಿಲ್ಲ ಎಂಬ ಮಾತು ಕೇಳಿ ಬಂದರೆ ಅದು ತಪ್ಪಾಗದು. ಹಾಗಾಬಾರದು. ಯಕ್ಷಗಾನದಲ್ಲಿ ಬಣ್ಣ ಎಂಬ ವಿಭಾಗವು ಬಲಿಷ್ಠವಾಗಿಯೇ ಇರಬೇಕು. ಅದು ಸೊರಗಲೇ ಬಾರದು. ಸೊರಗಿದರೆ ಯಕ್ಷಗಾನದ ಸೌಂದರ್ಯವೂ ನಷ್ಟವಾಗುವುದೆಂದು ನಮಗೆಲ್ಲರಿಗೂ ತಿಳಿದಿದೆ. ಖಂಡಿತವಾಗಿಯೂ ಬಣ್ಣದ ವೇಷಗಳಿಗೆ ಬೇಕಾದಷ್ಟು ಸಮಯ ಅವಕಾಶಗಳು ಮುಂದಿನ ದಿನಗಳಲ್ಲಿ ಸಿಗಲಿ. ಯಕ್ಷಗಾನದಲ್ಲಿ ಆ ವಿಭಾಗವು ವಿಜೃಂಭಿಸಲಿ ಎಂದು ಹಾರೈಸೋಣ. ಇಂದು ತೆಂಕುತಿಟ್ಟು ಯಕ್ಷಗಾನದಲ್ಲಿ ಅನೇಕ ಕಲಾವಿದರು ಬಣ್ಣದ ವೇಷಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಿಜ ಬದುಕಿನಲ್ಲಿ ಸಾತ್ವಿಕರಾದರೂ ರಂಗದಲ್ಲಿ ಅಸುರರಾಗಿ ಅಬ್ಬರಿಸುತ್ತಿದ್ದಾರೆ. ಇದುವೇ ಪರಕಾಯ ಪ್ರವೇಶ. ಪಾತ್ರಗಳನ್ನು ಕಟ್ಟಿಕೊಡುವ ರೀತಿ. ಪಾತ್ರಗಳ ಸ್ವಭಾವಗಳನ್ನು ಅರಿತು ಅಭಿನಯಿಸುವ ಕಲೆಯು. ಹಿರಿಯ ಕಲಾವಿದರ ಜತೆಗೆ ಉದಯೋನ್ಮುಖ ಬಣ್ಣದ ವೇಷಧಾರಿಗಳೂ ಬೆಳೆದು ಅನುಭವಗಳನ್ನು ಗಳಿಸಿಕೊಳ್ಳುತ್ತಿದ್ದಾರೆ. ಶ್ರೀ ಶಶಿಧರ ಶೆಟ್ಟಿ ಪಂಜ, ಕೊಯಿಕುಡೆ ಅವರು ಕಟೀಲು ಮೇಳದ ಅನುಭವಿ ಬಣ್ಣದ ವೇಷಧಾರಿ. ಕಳೆದ ಮೂವತ್ತು ವರ್ಷಗಳಿಂದ ಕಟೀಲು ಮೇಳದಲ್ಲಿ ವ್ಯವಸಾಯ ಮಾಡುತ್ತಿದ್ದಾರೆ. ಶ್ರೀ ಶಶಿಧರ ಶೆಟ್ಟಿ ಅವರು ಮ

ಅನುಭವಿ ಹಿರಿಯ ಕಲಾವಿದ ಬಾಯಾರು ಶ್ರೀ ರಘುನಾಥ ಶೆಟ್ಟಿ

Image
  ಯಾವುದೇ ಕ್ಷೇತ್ರದಲ್ಲಿ ಹಿರಿಯ ಅನುಭವಿಗಳು ಜತೆಗಿದ್ದರೆ ಕಿರಿಯರಿಗೆ, ಅಭ್ಯಾಸಿಗಳಿಗೆ ಅದರಿಂದ ಅನುಕೂಲವಾಗುತ್ತದೆ. ಹಿರಿಯರ ಅನುಭವ,ವಿದ್ಯೆಗಳನ್ನು ಪಡೆದು ಕಲಿಕಾಸಕ್ತರು ಮುನ್ನಡೆಯಲು ಅವಕಾಶವಾಗುತ್ತದೆ. ಅಧ್ಯಯನಕ್ಕೆ, ಮಾಹಿತಿ ಸಂಗ್ರಹಕ್ಕೆ, ಮುನ್ನಡೆಸುವುದಕ್ಕೆ ಹಿರಿಯ ಅನುಭವಿಗಳ ಉಪಸ್ಥಿತಿಯು ಇರಲೇಬೇಕು. ಯಕ್ಷಗಾನ ಕಲಾ ಕ್ಷೇತ್ರದಲ್ಲಿ ಇಂದು ಅನೇಕ ಹಿರಿಯ ಅನುಭವಿ ಕಲಾವಿದರು ವ್ಯವಸಾಯ ಮಾಡುತ್ತಿದ್ದಾರೆ. ಶ್ರೀ ರಘುನಾಥ ಶೆಟ್ಟಿ ಬಾಯಾರು ಅವರು ತೆಂಕುತಿಟ್ಟಿನ ಹಿರಿಯ ಅನುಭವಿ ಕಲಾವಿದರು. ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಕಲಾವಿದರು. 1964ರಿಂದ ಯಕ್ಷಗಾನ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ.  ಅನುಭವೀ ಕಲಾವಿದ ಶ್ರೀ ರಘುನಾಥ ಶೆಟ್ಟರ ಹುಟ್ಟೂರು ಕಾಸರಗೋಡು ಜಿಲ್ಲೆಯ ಬಾಯಾರು ಸಮೀಪದ ಕುಳ್ಯಾರು. 1950 ಜೂನ್ 6ರಂದು ಪೈವಳಿಕೆ ಶ್ರೀ ಐತಪ್ಪ ಶೆಟ್ಟಿ ಮತ್ತು ಶ್ರೀಮತಿ ಕಲ್ಯಾಣಿ ಶೆಟ್ಟಿ ದಂಪತಿಗಳ ಹಿರಿಯ ಮಗನಾಗಿ ಜನನ. ಪೈವಳಿಕೆ ಶ್ರೀ ಐತಪ್ಪ ಶೆಟ್ಟರನ್ನು ಕಲಾಭಿಮಾನಿಗಳೆಲ್ಲರೂ ತಿಳಿದಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಖ್ಯಾತ ಸ್ತ್ರೀ ವೇಷಧಾರಿಯಾಗಿ ಮೆರೆದವರು. ಜಾಹೀರಾತು  ರಘುನಾಥ ಶೆಟ್ಟಿ ಬಾಯಾರು ಅವರು ಓದಿದ್ದು 6ನೇ ತರಗತಿ ವರೆಗೆ. ಬಾಯಾರು ಹೆದ್ದಾರಿ ಶಾಲೆಯಲ್ಲಿ. ಎಳವೆಯಲ್ಲಿ ಯಕ್ಷಗಾನಾಸಕ್ತಿ ಇತ್ತು. ತೀರ್ಥರೂಪರ ಜತೆ ತೆರಳಿ ಯಕ್ಷಗಾನ ಪ್ರದರ್ಶನಗಳನ್ನು ನೋಡುವ ಅವಕಾಶವೂ

ಹಿರಿಯ ಕಲಾವಿದ ಶ್ರೀ ಪಡ್ರೆ ಕುಮಾರ

Image
ಶ್ರೀ ಪಡ್ರೆ ಕುಮಾರ ಇವರು ಪ್ರಸ್ತುತ ಕಟೀಲು ಮೇಳದ ಕಲಾವಿದರಾಗಿ ವ್ಯವಸಾಯ ಮಾಡುತ್ತಿದ್ದಾರೆ. ತೆಂಕುತಿಟ್ಟಿನ, ಕಟೀಲು ಮೇಳದ ಹಿರಿಯ ವೇಷಧಾರಿ. ಇವರೊಬ್ಬ ಸವ್ಯಸಾಚಿ ಕಲಾವಿದ. ಯಾವ ವೇಷವನ್ನೂ ಮಾಡಬಲ್ಲರು. ಇವರು ಶ್ರೀ ಪಡ್ರೆ ಚಂದು ಅವರ ಪುತ್ರ. ಶ್ರೀ ಪಡ್ರೆ ಚಂದು ಅವರನ್ನು ಕಲಾಭಿಮಾನಿಗಳೆಲ್ಲರೂ ಬಲ್ಲರು.  ಶ್ರೀ ಪಡ್ರೆ ಚಂದು ಅವರ ಪುತ್ರ ಶ್ರೀ ಪಡ್ರೆ ಕುಮಾರ ಅವರು ಕಳೆದ 57 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ವ್ಯವಸಾಯ ಮಾಡುತ್ತಿದ್ದಾರೆ. ಸರಳ, ಸಜ್ಜನ, ವಿನಯವಂತ ಹಿರಿಯ ಕಲಾವಿದ. ಪಡ್ರೆ ಕುಮಾರ ಅವರು ಬಂಟ್ವಾಳ ತಾಲೂಕು ವಿಟ್ಲಪಡ್ನೂರು ಗ್ರಾಮದ ಕೊಡುಂಗಾಯಿ ಸಮೀಪದ ನಡ್ಯಾಳ ಎಂಬಲ್ಲಿ ಶ್ರೀ ಪಡ್ರೆ ಚಂದು ಮತ್ತು ಭಾಗೀರಥಿ ದಂಪತಿಗಳ ಹಿರಿಯ ಮಗನಾಗಿ 1947ನೇ ಇಸವಿಯಂದು ಜನಿಸಿದರು. ಪಡ್ರೆ ಕುಮಾರ ಅವರು ಓದಿದ್ದು 5ನೇ ತರಗತಿ ವರೆಗೆ. ಕೊಡುಂಗಾಯಿ ಶಾಲೆಯಲ್ಲಿ. ತೀರ್ಥರೂಪರು  ಕಲಾವಿದರಾಗಿದ್ದ ಕಾರಣ ಸಹಜವಾಗಿ ಯಕ್ಷಗಾನಾಸಕ್ತಿ ಇತ್ತು. ಆಟಗಳನ್ನು ನೋಡುತ್ತಿದ್ದರು. ಹಗಲು ಗೆಳೆಯರ ಜತೆ ಅಣಕು ಪ್ರದರ್ಶನಗಳೂ ನಡೆಯುತ್ತಿತ್ತು. ಅಡಿಕೆ ಮರದ ಹಾಳೆಗಳನ್ನು ಕತ್ತರಿಸಿ ಕತ್ತಿ ಮತ್ತು ಕಿರೀಟಗಳನ್ನು ಸಿದ್ಧಪಡಿಸಿ ಕುಣಿಯುತ್ತಿದ್ದರು. ಗುಡ್ಡ, ಗದ್ದೆ, ಮನೆಯಂಗಳಗಳೇ ವೇದಿಕೆಯಾಗುತ್ತಿತ್ತು. ಪಡ್ರೆ ಚಂದು ಅವರು ಆಗ ಕುಂಡಾವು ಮೇಳದಲ್ಲಿದ್ದರು. ಮನೆಯಲ್ಲಿಯೇ ಇತರ ಕಲಾವಿದರಿಗೆ ಚಂದು ಅವರು ನಾಟ್ಯ ಕಲಿಸುತ್ತಿದ್ದಾಗ ಕುಮಾರ ಅವರು ನೋಡುತ್ತಿದ್ದರು.

ಪುರಾಣ, ತುಳು ಪ್ರಸಂಗಗಳ ಅನುಭವಿ ಶ್ರೀ ಗುಡ್ಡಪ್ಪ ಸುವರ್ಣ ಪಂಜ

Image
ಶ್ರೀ ಗುಡ್ಡಪ್ಪ ಸುವರ್ಣ ಪಂಜ ಇವರು ತೆಂಕುತಿಟ್ಟಿನ ಹಿರಿಯ ಅನುಭವಿ ಕಲಾವಿದರು. ಪುರಾಣ ಮತ್ತು ತುಳು ಪ್ರಸಂಗಗಳಲ್ಲಿ ಪಾತ್ರಗಳನ್ನು ನಿರ್ವಹಿಸಿ ಕಲಾಭಿಮಾನಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇವರು ಲೇಖಕರೂ ಆಗಿ ಸಾಹಿತ್ಯಸೇವೆಯನ್ನು ಕಲಾಸೇವೆಯ ಜತೆ ಮಾಡಿಕೊಂಡು ಬಂದವರು. ಹಲವು ಭಕ್ತಿ ಗೀತೆಗಳನ್ನೂ ಹದಿನೈದು ಪ್ರಸಂಗಗಳನ್ನೂ ರಚಿಸಿರುತ್ತಾರೆ. ಅಲ್ಲದೆ ಸುಮಾರು ಇಪ್ಪತ್ತೈದು ಪ್ರಸಂಗಗಳಿಗೆ ಪದ್ಯ ರಚನೆಯನ್ನೂ ಮಾಡಿರುತ್ತಾರೆ. ಕಳೆದ ನಲುವತ್ತು ವರ್ಷಗಳಿಂದ ಯಕ್ಷಗಾನ ಕಲಾವಿದರಾಗಿ ಕಲಾ ಮಾತೆಯ ಸೇವೆಯನ್ನು ಮಾಡುತ್ತಿದ್ದಾರೆ. ಹಿರಿಯ ಅನುಭವಿ ಕಲಾವಿದ ಶ್ರೀ ಗುಡ್ಡಪ್ಪ ಸುವರ್ಣರ ಹುಟ್ಟೂರು ಸುಳ್ಯ ತಾಲೂಕಿನ ಪಂಜ. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸಮೀಪದ ಊರು ಪಂಜ. 1967 ಜನವರಿ 27ರಂದು ಶ್ರೀ ಚೋಮಣ್ಣ ಪೂಜಾರಿ ಮತ್ತು ಶ್ರೀಮತಿ ವಾಸಮ್ಮ ದಂಪತಿಗಳ ಪುತ್ರನಾಗಿ ಜನನ. ಗುಡ್ಡಪ್ಪ ಸುವರ್ಣರ ತಾಯಿಯ ತಂದೆ ಶ್ರೀ ಮಂಜಪ್ಪ ಪೂಜಾರಿ ಅವರು ಯಕ್ಷಗಾನ ಕಲಾವಿದರಾಗಿದ್ದರು. ಶ್ರೀ ಗುಡ್ಡಪ್ಪ ಸುವರ್ಣರಿಗೆ ಬಾಲ್ಯದಲ್ಲೇ ಯಕ್ಷಗಾನ ಆಸಕ್ತಿ ಇತ್ತು. ಪ್ರದರ್ಶನಗಳನ್ನು ಬಿಡದೆ ನೋಡಿ ಆನಂದಿಸುತ್ತಿದ್ದರು. ಓದಿದ್ದು ಐದನೇ ತರಗತಿ ವರೆಗೆ. ಪಂಜ ಸಮೀಪದ ಪಂಬೆತ್ತಾಡಿ ಶಾಲೆಯಲ್ಲಿ. ಕಲಾವಿದನಾಗಬೇಕೆಂಬ ಆಸೆಯಿಂದ ಯಕ್ಷಗಾನ ನಾಟ್ಯ ಕಲಿಯಲು ತೀರ್ಮಾನಿಸಿದ್ದರು. ಕಲ್ಮಡ್ಕ ಸಂಗಮ ಕಲಾ ಸಂಘದ ರೂವಾರಿಗಳಾದ ಕೆರೆಕೋಡಿ ಪಂಡಿತ ಗಣಪತಿ ಭಟ್ಟರ ಪ್ರೋತ್ಸಾಹದಲ್ಲಿ ತೆಂ

ಅನುಭವಿ ಪುಂಡುವೇಷಧಾರಿ - ಶ್ರೀ ರತ್ನಾಕರ ಹೆಗ್ಡೆ ಪುತ್ತೂರು

Image
ತೆಂಕುತಿಟ್ಟು ಯಕ್ಷಗಾನದಲ್ಲಿ ಇಂದು ಅನೇಕ ಪುಂಡುವೇಷಧಾರಿಗಳು ಕಲಾ ಸೇವೆಯನ್ನು ಮಾಡುತ್ತಿದ್ದಾರೆ. ಪ್ರವೇಶ, ಗಿರಕಿ, ಹುಡಿನಾಟ್ಯ, ಯುದ್ಧದ ಕ್ರಮಗಳು, ಜಲಕೇಳಿ, ವನವಿಹಾರ, ಯುದ್ಧರೀತಿಗಳು ಮೊದಲಾದ ಸಂದರ್ಭಗಳಲ್ಲಿ ಅಭಿನಯಿಸುತ್ತಾ ಇವರು ಪ್ರೇಕ್ಷಕರ ಮನವನ್ನು ಬೇಗನೆ ಸೂರೆಗೊಳ್ಳುತ್ತಾರೆ. ಪ್ರೇಕ್ಷಕರ ಮನವನ್ನು ಗೆಲ್ಲಲು ಈ ವಿಭಾಗದಲ್ಲಿ ಅವಕಾಶಗಳು ಧಾರಾಳವಾಗಿ ದೊರೆಯುತ್ತವೆ. ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಅದು ಪಾತ್ರೋಚಿತವಾಗಿಯೇ ಇರಬೇಕೆಂಬ ಎಚ್ಚರಿಕೆಯು ಇದ್ದಾಗ ಪಾತ್ರದ ಜತೆ ಪಾತ್ರವನ್ನು ಧರಿಸಿದ ಕಲಾವಿದನೂ ಗೆಲ್ಲುತ್ತಾ ಸಾಗುತ್ತಾನೆ. ಮುಂದು ಅವನೊಬ್ಬ ಶ್ರೇಷ್ಠ ಪುಂಡು ವೇಷಧಾರಿಯೇ ಆಗುತ್ತಾನೆ. ಹೀಗೆ ಸಾಗಿ ಬಂದ ಪುಂಡು ವೇಷಧಾರಿಗಳಲ್ಲೊಬ್ಬರು ಪುತ್ತೂರು ಶ್ರೀ ರತ್ನಾಕರ ಹೆಗ್ಡೆ ಅವರು. ಇವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಕಲಾವಿದರು. ಶ್ರೀ ರತ್ನಾಕರ ಹೆಗ್ಡೆ ಅವರ ಮೂಲಮನೆ ಪುತ್ತೂರು ಸಮೀಪದ ಬಪ್ಪಳಿಗೆ. ಶ್ರೀ ಕರುಣಾಕರ ಹೆಗ್ಡೆ ಮತ್ತು ಶ್ರೀಮತಿ ಸುಲೋಚನಾ ದಂಪತಿಗಳ ಪುತ್ರನಾಗಿ ಮಂಗಳೂರಿನಲ್ಲಿ 1966, ಜೂನ್ 28ರಂದು ಜನನ. ಕರುಣಾಕರ ಹೆಗ್ಡೆ ಅವರ ಎಂಟು ಮಂದಿ ಮಕ್ಕಳಲ್ಲಿ (ಐದು ಗಂಡು ಮತ್ತು ಮೂರು ಹೆಣ್ಣು) ರತ್ನಾಕರ ಹೆಗ್ಡೆ ಕಿರಿಯವರು. ಕರುಣಾಕರ ಹೆಗ್ಡೆ ಅವರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮೂವತ್ತೈದು ವರ್ಷಗಳ ಸೇವೆ ಸಲ್ಲಿಸಿದವರು.(ಮಂಗಳೂರು). ಇವರು ಯಕ್ಷಗಾನ ಹಿಮ್ಮೇಳ ಮುಮ್ಮೇಳಗಳನ್ನು ಕ

ಯಕ್ಷಾಗಸದಲ್ಲಿ ಮಿಂಚಿ ಮರೆಯಾದ ಕಲಾತಾರೆ - ಕಾಂಚನ ಶ್ರೀ ಸಂಜೀವ ರೈ

Image
  ಅನುಪಮ ಕಲೆಯಾದ ಯಕ್ಷಗಾನದಲ್ಲಿ ಸಾಧನೆಯ ಮೂಲಕವೇ ಮಿಂಚಿ, ಕಲಾಭಿಮಾನಿಗಳಿಂದ ಪ್ರಶಂಸೆಗೆ ಪಾತ್ರರಾಗಿ ಅನೇಕ ಕಲಾವಿದರುಗಳು ಕೀರ್ತಿಶೇಷರಾದರು. ಪ್ರೇಕ್ಷಕರಿಗೆ ಅವರ ನೆನಪು ಸದಾ ಇರುತ್ತದೆ. ಅಂತಹ ಹಿರಿಯ ಶ್ರೇಷ್ಠ ಕಲಾವಿದರನ್ನೂ, ಅವರ ಪಾತ್ರ ನಿರ್ವಹಣೆಯನ್ನೂ ನೆನಪಿಸಿಕೊಂಡು ಕಲಾಭಿಮಾನಿಗಳು ಸಂತೋಷಪಡುತ್ತಾರೆ. ಯಕ್ಷಗಾನ ಕ್ಷೇತ್ರದಲ್ಲಿ ಸಾಧಕನಾಗಿ ಮೆರೆದು ಮರೆಯಾದ ಕಲಾವಿದರಲ್ಲಿ ಕಾಂಚನ ಶ್ರೀ ಸಂಜೀವ ರೈಗಳ ಹೆಸರು ಮೊದಲ ಸಾಲಿನಲ್ಲಿಯೇ ಇರುತ್ತದೆ. ಮರೆಯಲಾಗದ ಮರೆಯಬಾರದ ಮಹಾನುಭಾವರಿವರು. ಸದಾ ಅಧ್ಯಯನಶೀಲರಾಗಿ ಪುರಾಣ ಮತ್ತು ತುಳು ಪ್ರಸಂಗಗಳಲ್ಲಿ ಸಮಾನವಾಗಿ ಮಿಂಚಿದ ಕಲಾವಿದರುಗಳಲ್ಲಿ ಇವರೂ ಒಬ್ಬರು.  ಕಾಂಚನ ಶ್ರೀ ಸಂಜೀವ ರೈಗಳು ಯಕ್ಷಗಾನ ಕ್ಷೇತ್ರದಲ್ಲಿ ಕಾಂಚನದಂತೆ ಹೊಳೆದು ಕಾಣಿಸಿಕೊಂಡವರು.  ಕಾಂಚನ ಶ್ರೀ ಸಂಜೀವ ರೈಗಳ ಹುಟ್ಟೂರು ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ನಗ್ರಿಗುತ್ತು. ಶ್ರೀ ಮುಂಡಪ್ಪ ರೈ ಮತ್ತು ಶ್ರೀಮತಿ ಮುತ್ತಕ್ಕೆ ದಂಪತಿಗಳ ಪುತ್ರನಾಗಿ 1942ನೇ ಇಸವಿ ಆಗಸ್ಟ್ 24ರಂದು ಜನನ. ಶ್ರೀ ಮುಂಡಪ್ಪ ರೈಗಳು ಉತ್ತಮ ಕೃಷಿಕರು. ಮಾಣಿ ಸಮೀಪದ ಬಾರ್ದಿಲ, ಅಲ್ಲದೆ ಪೆಲತ್ತಿಮಾರು, ನಾಯ್ಲ ಎಂಬ ಸ್ಥಳಗಳಲ್ಲಿ ವಾಸವಾಗಿ ಕೃಷಿ ಕಾರ್ಯಗಳಲ್ಲಿ ತೊಡಗಿಸಿಕೊಂಡವರು. ಬಳಿಕ ಕಾಂಚನ ಸಮೀಪದ ಪಾತ್ರಮಾಡಿ ಎಂಬಲ್ಲಿ ವಾಸವಾಗಿದ್ದರು. ಇವರು ಕಲಾಸಕ್ತರಾಗಿದ್ದರು.  ಕಾಂಚನ ಶ್ರೀ ಸಂಜೀವ ರೈಗಳು ಓದಿದ್ದು ಏಳನೆಯ ತರಗತಿ ವರೆಗೆ. ಗೋಳಿತಟ್ಟು ಮ

ಸಂಪ್ರದಾಯದ ಚೌಕಟ್ಟನ್ನು ಮೀರದ ಸ್ತ್ರೀ ಪಾತ್ರಧಾರಿ - ಶ್ರೀ ಅಂಬಾಪ್ರಸಾದ ಪಾತಾಳ

Image
  ಫೋಟೋ: ನವೀನ ಕೃಷ್ಣ ಭಟ್  ಯಕ್ಷಗಾನದಲ್ಲಿ ಸ್ತ್ರೀ ಪಾತ್ರಗಳನ್ನು ನಿರ್ವಹಿಸುವುದು ಅಷ್ಟು ಸುಲಭವಲ್ಲ. ಗಂಡುಕಲೆಯಲ್ಲಿ ಗಂಡಸರೇ ಸ್ತ್ರೀ ಪಾತ್ರಗಳನ್ನು ಮಾಡಿಕೊಂಡು ಬರುತ್ತಿದ್ದುದು ಮೊದಲಿನಿಂದಲೂ ನಡೆದುಬಂದ ರೀತಿ. ಇದಕ್ಕೆ ಕಾರಣಗಳು ಹಲವು ಇರಬಹುದು. ತಾನು ಧರಿಸಿದ ಪಾತ್ರವು ಹೆಣ್ಣು ಎಂಬ ಪ್ರಜ್ಞೆಯು ಕೊನೆಯ ತನಕವೂ ಕಲಾವಿದನಿಗೆ ಇರಲೇಬೇಕು. ಎಚ್ಚರ ತಪ್ಪಿದರೆ ಪಾತ್ರಕ್ಕೆ ಅಪಚಾರವಾಗುವುದಂತೂ ಖಂಡಿತ. ಪೂರ್ವರಂಗದ ಮುಖ್ಯ ಸ್ತ್ರೀವೇಷವು ಸ್ತ್ರೀಸಹಜವಾದ ಹಾವಭಾವಗಳನ್ನೂ, ನಾಟ್ಯದಲ್ಲಿ ಲಯ ಸಾಮರ್ಥ್ಯವನ್ನೂ ಸಿದ್ಧಿಸಿಕೊಳ್ಳಲು ಅನುಕೂಲವಾಗುತ್ತದೆ. ಬಳಿಕ ಪ್ರಸಂಗಗಳಲ್ಲಿ ಪೋಷಕ ಪಾತ್ರಗಳನ್ನು ಮಾಡುತ್ತಾ, ಕಲಿತು ಬೆಳೆಯುತ್ತಾ ಪ್ರತಿಭೆಯ ಆಧಾರದಲ್ಲೇ ಮುಖ್ಯ ಸ್ತ್ರೀಪಾತ್ರಗಳನ್ನು ಮಾಡಿದಾಗ ಆ ಪಾತ್ರವು ಗೆಲ್ಲುತ್ತದೆ. ಪ್ರದರ್ಶನವೂ ರಂಜಿಸುತ್ತದೆ. ಹಿತಮಿತವಾದ ನಾಟ್ಯ, ಮಾತುಗಾರಿಕೆ ಯಕ್ಷಗಾನದ ಸ್ತ್ರೀ ಪಾತ್ರಗಳಿಗೆ ಸಾಕಾಗುತ್ತದೆ. ಆದರೆ ಭಾವನಾತ್ಮಕವಾಗಿ ಅಭಿನಯಿಸುವ ಕಲೆಯು ಕರಗತವಾಗಿರಲೇಬೇಕು. ಕೆಲವೊಂದು ಪದ್ಯಗಳಿಗೆ ಮಾತನಾಡಬೇಕೆಂದಿಲ್ಲ. ಭಾಗವತರ ಹಾಡನ್ನು ಅನುಸರಿಸುತ್ತಾ ಅಭಿನಯಿಸಿದರೆ ಸಾಕಾಗುತ್ತದೆ. ಶೃಂಗಾರ, ಕರುಣ, ಭಕ್ತಿ ರಸಗಳಲ್ಲಿ ಅಭಿನಯಿಸಿ ತನ್ನ ಪ್ರತಿಭಾ ಪ್ರಕಟೀಕರಣಕ್ಕೆ ಸ್ತ್ರೀ ವೇಷಧಾರಿಗೆ ಯಕ್ಷಗಾನದಲ್ಲಿ ಹೆಚ್ಚು ಅವಕಾಶಗಳು ಇರುತ್ತವೆ. ಕಸೆ ಸ್ತ್ರೀ ವೇಷಗಳು ವೀರರಸ ಪ್ರಧಾನವಾಗಿರುತ್ತದೆ. (ಮೀನಾಕ್ಷಿ, ಶಶಿಪ್ರಭೆ, ಪ್

ಕೇದಗಡಿ ಶ್ರೀ ಗುಡ್ಡಪ್ಪ ಗೌಡ - ಪರಂಪರೆಯ ಶಿಸ್ತಿನ ಕಲಾವಿದ

Image
  ಶ್ರೀ ಕೇದಗಡಿ ಗುಡ್ಡಪ್ಪ ಗೌಡರು ಪರಂಪರೆಯ ಶಿಸ್ತಿನ ಕಲಾವಿದರಾಗಿ ಯಕ್ಷಗಾನ ಕ್ಷೇತ್ರದಲ್ಲಿ ಮೆರೆದವರು. ಸಂಪ್ರದಾಯ ಬದ್ಧ ನಾಟ್ಯ, ಪಾತ್ರೋಚಿತವಾದ, ಹಿತಮಿತವಾದ ಸಂಭಾಷಣೆ, ಗತ್ತುಗಾರಿಕೆಗಳಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದ ಪ್ರತಿಭಾವಂತ ಕಲಾವಿದರಿವರು. ವೀರರಸದ ಪದ್ಯಗಳಿಗೆ ಕುಣಿಯುತ್ತಾ ಎರಡೂ ಕಾಲುಗಳನ್ನು ಎತ್ತಿ ಹಾರುವ ಕ್ರಮವನ್ನು ಕೊನೆಯ ವರೆಗೂ ಉಳಿಸಿಕೊಂಡು ಬಂದಿದ್ದರು. ಸಂಪ್ರದಾಯವನ್ನು ಯಾವತ್ತೂ ಮುರಿದು ಮೆರೆದವರಲ್ಲ. ಆದುದರಿಂದ ಕಲಿಕಾಸಕ್ತರಿಗೆ ಇವರೊಬ್ಬ ಆದರ್ಶ, ಅನುಸರಣೀಯ ಕಲಾಕಾರರಾಗಿದ್ದರು. ತುಸು ಗಿಡ್ಡ ಆಳಂಗ ಎಂಬುದನ್ನು ಹೊರತುಪಡಿಸಿದರೆ ಕೊರತೆಯಿಲ್ಲದ ಪರಿಪೂರ್ಣ ವೇಷಗಾರಿಕೆ ಇವರದು. ಪಾತ್ರ ನಿರ್ವಹಣೆಯ ಯಾವ ವಿಭಾಗಗಳಲ್ಲೂ ಅತಿರೇಕತೆ ಕಾಣದು. ಜತೆಗೆ ಕಡಿಮೆಯೂ ಆಗದೆ ಕೊರತೆಯಾಗದಂತೆ ಪಾತ್ರವನ್ನು ಚಿತ್ರಿಸುವ ಕಲೆಯೂ ಕರಗತವಾಗಿತ್ತು.  ಗಡಿನಾಡ ಕಾಸರಗೋಡು ಅನೇಕ ಹೆಸರಾಂತ ಕಲಾವಿದರನ್ನು ಯಕ್ಷಗಾನ ಕಲಾಮಾತೆಯ ಮಡಿಲಿಗಿಕ್ಕಿದ ಮಣ್ಣು. ಅಂತಹಾ ಗಡಿನಾಡ ಶ್ರೇಷ್ಠ ಕಲಾವಿದರಲ್ಲಿ ಕೇದಗಡಿ ಶ್ರೀ ಗುಡ್ಡಪ್ಪ ಗೌಡರೂ ಒಬ್ಬರು. ಪುಂಡುವೇಷಧಾರಿಯಾಗಿ ಕಲಾಬದುಕನ್ನು ಆರಂಭಿಸಿ, ಪೀಠಿಕೆ ವೇಷಧಾರಿಯಾಗಿ ಬೆಳೆದು, ಎದುರು ವೇಷಧಾರಿಯಾಗಿ ಕಲಾಭಿಮಾನಿಗಳನ್ನು ರಂಜಿಸಿದ್ದರು. ತೆಂಕುತಿಟ್ಟಿನ ಖ್ಯಾತ ಕಲಾವಿದರಾಗಿ ಮೆರೆದ ಕೇದಗಡಿ ಶ್ರೀ ಗುಡ್ಡಪ್ಪ ಗೌಡರು ಜನಿಸಿದ್ದು ಕಾಸರಗೋಡು ಪ್ರದೇಶದ ದೇಲಂಪಾಡಿ ಗ್ರಾಮದ ಬನಾರಿ ಸಮೀಪದ ಕೇದಗಡಿ