ಆಪದ್ಬಾಂಧವ ಸವ್ಯಸಾಚಿ ಕಲಾವಿದ ಪುತ್ತೂರು ಗಂಗಾಧರ ಜೋಗಿ
ಶ್ರೀ ಪುತ್ತೂರು ಗಂಗಾಧರ ಜೋಗಿಯವರು ಶ್ರೀ ಧರ್ಮಸ್ಥಳ ಮೇಳದ ದಣಿವರಿಯದ ಕಲಾವಿದ. ಭಾಗವತರು ತನಗೆ ನೀಡಿದ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿಷ್ಠೆಯಿಂದ ಮಾಡುತ್ತಾ ಬಂದ ಕಲಾಮಾತೆಯ ಸುಪುತ್ರ. ಎಷ್ಟು ವೇಷಗಳನ್ನೂ ಮಾಡಬಲ್ಲರು. ಯಾವ ವೇಷವನ್ನೂ ಮಾಡಬಲ್ಲರು. ಸ್ತ್ರೀವೇಷ, ಪುಂಡುವೇಷ, ಕಿರೀಟ ವೇಷ, ಹಾಸ್ಯ, ಅನಿವಾರ್ಯವಾದರೆ ಕೇಶಾವರೀ ಬಣ್ಣದ ವೇಷಕ್ಕೂ ಸೈ. ಹೆಣ್ಣು ಬಣ್ಣಗಳನ್ನೂ ಅಂದವಾಗಿ ನಿರ್ವಹಿಸಬಲ್ಲರು. ಇಂತಹ ಕಲಾವಿದರು ಸಿದ್ಧರಾಗುವುದು ಬಹಳ ಅಪರೂಪ. ಮೇಳಕ್ಕೆ ಇವರಂತಹ ಕಲಾವಿದರು ಅನಿವಾರ್ಯ, ಹಿರಿಯ ಕಲಾವಿದನಾದರೂ ಅನಿವಾರ್ಯ ಸಂದರ್ಭದಲ್ಲಿ ಪ್ರಸಂಗದ ಸಣ್ಣಪುಟ್ಟ ಪಾತ್ರ ಗಳನ್ನು ನಿರ್ವಹಿಸಿ ವ್ಯಕ್ತಿತ್ವದಲ್ಲಿ ದೊಡ್ಡವರಾಗಿ ಮೆರೆದವರು ಗಂಗಾಧರರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ ಕಳೆದ 36 ವರ್ಷಗಳಿಂದ ನಿರಂತರ ಕಲಾವಿದನಾಗಿ ವ್ಯವಸಾಯ ಮಾಡಿದ ಹಿರಿಮೆಗೆ ಪಾತ್ರರಾಗಿದ್ದಾರೆ ಶ್ರೀಯುತರು, ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ| ವೀರೇಂದ್ರ ಹೆಗಡೆಯವರ, ಡಿ. ಹರ್ಷೇಂದ್ರ ಕುಮಾರರ ಆಶೀರ್ವಾದ, ಸಹಕಲಾವಿದರ ಸಹಕಾರದಿಂದ ನಾವು ಕಲಾಮಾತೆಯ ಸೇವೆಯನ್ನು ಮಾಡುವಂತಾಯಿತು ಎಂಬುದು ಪುತ್ತೂರು ಗಂಗಾಧರರ ಪ್ರಾಮಾಣಿಕ ಅನಿಸಿಕೆ.
ಶ್ರೀ ಪುತ್ತೂರು ಗಂಗಾಧರ ಜೋಗಿ
1964ನೇ ಇಸ್ವಿ ಆಗಸ್ಟ್ 12ರಂದು ಪುತ್ತೂರು ತಾಲೂಕು ಕೋಡಿಂಬಾಡಿ ಸಮೀಪ ಸೇಡಿಯಾಪು ಎಂಬಲ್ಲಿ ನಾರಾಯಣಯ್ಯ ಮತ್ತು ಲಕ್ಷ್ಮಿ ಅಮ್ಮ ದಂಪತಿಗಳಿಗೆ ಮಗನಾಗಿ ಜನಿಸಿದ ಗಂಗಾಧರ ಜೋಗಿಯವರು ಕೋಡಿಂಬಾಡಿ ಶಾಲೆಯಲ್ಲಿ 7ನೇ ತರಗತಿಯ ವರೇಗೆ ಓದಿದರು. ಎಳವೆಯಲ್ಲೇ ಇವರಿಗೆ ಯಕ್ಷಗಾನಾಸಕ್ತಿ ಅತೀವವಾಗಿತ್ತು. ಪುತ್ತೂರು ಪರಿಸರದಲ್ಲಿ ನಡೆಯುತ್ತಿದ್ದ ಪ್ರದರ್ಶನಗಳನ್ನು ಬಿಡದೆ ನೋಡುತ್ತಿದ್ದ ಅಪ್ಪಟ ಯಕ್ಷಗಾನಾಭಿಮಾನಿ. ಯಕ್ಷಗಾನ ಕಲೆಯ ಬಗೆಗೆ ಇವರಿಗಿರುವ ಆಸಕ್ತಿಯನ್ನು ಗಮನಿಸಿದವರು ಖ್ಯಾತ ಕಲಾವಿದ ಕುಂಬಳೆ ಶ್ರೀಧರ ರಾಯರು. ಬಾಲಕ ಗಂಗಾಧರನನ್ನು ಶ್ರೀ ಧರ್ಮಸ್ಥಳ ಯಕ್ಷಗಾನ ಕಲಿಕಾ ಕೇಂದ್ರಕ್ಕೆ ಕರೆದೊಯ್ದರು. ಶ್ರೀ ಕೆ. ಗೋವಿಂದ ಭಟ್ ಮತ್ತು ಕರ್ಗಲ್ಲು ವಿಶ್ವೇಶ್ವರ ಭಟ್ಟರಿಂದ ಗಂಗಾಧರ ಅವರು ಯಕ್ಷಗಾನ ಹೆಜ್ಜೆಗಾರಿಕೆಯನ್ನು ಕಲಿತರು. ಶ್ರೀ ಧರ್ಮಸ್ಥಳ ಮೇಳಕ್ಕೆ ಬಾಲಕಲಾವಿದನಾಗಿ ಸೇರ್ಪಡೆಯಾಗಿ ಪೂರ್ವರಂಗದಲ್ಲಿ ಬಾಲಗೋಪಾಲನಾಗಿ, ಮುಖ್ಯ ಸ್ತ್ರೀವೇಷಧಾರಿಯೂ, ಪ್ರಸಂಗದಲ್ಲಿ ತನ್ನ ಪಾಲಿಗೆ ಬಂದ ಪಾತ್ರಗಳನ್ನು ಶ್ರದ್ಧೆಯಿಂದ ನಿರ್ವಹಿಸುತ್ತಾ ಹಂತ ಹಂತವಾಗಿ ಬೆಳೆದು ಬಂದು ಪುತ್ತೂರು ಗಂಗಾಧರ ಜೋಗಿ ಯವರು ಈಗ ಮೇಳದ ಹಿರಿಯ ಕಲಾವಿದರಲ್ಲೊಬ್ಬರು. ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮ್ಯೆಯ ಮಾಲತಿ ಪಾತ್ರ (ಕುಂಬಳೆ ಸುಂದರ ರಾಯರು ಮತ್ತು ಕೆ. ಗೋವಿಂದ ಭಟ್ಟರು ನಿರ್ವಹಿಸಿದ ಗೋವಿಂದ ದೀಕ್ಷಿತನ ಪಾತ್ರದ ಜತೆ) ಅಲ್ಲದೆ ಅನೇಕ ಸ್ತ್ರೀಪಾತ್ರಗಳಲ್ಲಿ ಇವರು ಮಿಂಚಿದರು. ಕಸೆ ಸ್ತ್ರೀವೇಷ, ಗರತಿ ವೇಷಗಳು ಅಲ್ಲದೆ ಶೃಂಗಾರ ವೇಷಗಳಲ್ಲಿ ಮಿಂಚಿದ ಇವರಿಗೆ ಎಲ್ಲಾ ರೀತಿಯ ಪಾತ್ರಗಳನ್ನೂ ನಿರ್ವಹಿಸುವ ಕಲೆಯು ಕರಗತ ವಾಗಿದೆ.
ಕಡತೋಕಾ ಮಂಜುನಾಥ ಭಾಗವತರು, ಪುತ್ತಿಗೆ ರಘುರಾಮ ಹೊಳ್ಳರು, ಪುತ್ತೂರು ನಾರಾಯಣ ಹೆಗ್ಡೆ, ಎಂಪೆಕಟ್ಟೆ ರಾಮಯ್ಯ ರೈ, ಕುಂಬಳೆ ಸುಂದರ ರಾವ್, ಕೆ. ಗೋವಿಂದ ಭಟ್ಟರು, ಕುಂಬಳೆ ಶ್ರೀಧರ ರಾಯರು, ಪುತ್ತೂರು ಶ್ರೀಧರ ಭಂಡಾರಿ, ನಿಡ್ಲೆ ಗೋವಿಂದ ಭಟ್ಟರು, ಉಬರಡ್ಕ ಉಮೇಶ ಶೆಟ್ಟಿ, ತಾರಾನಾಥ ಬಲ್ಯಾಯ, ವಸಂತ ಗೌಡರಂತಹ ಕಲಾವಿದರು ಮಾರ್ಗದರ್ಶನ ನೀಡಿದರು. ಆ ಶ್ರೇಷ್ಠ ಕಲಾವಿದರ ಒಡನಾಟದಿಂದ ನಾನೂ ಕಲಾವಿದನಾದೆ ಎಂದು ಹೇಳುವ ಗಂಗಾಧರ ಜೋಗಿಯವರು ಕಿರಿಯ ಕಲಾವಿದರ ಮತ್ತು ಕಲಾಭಿಮಾನಿಗಳ ಪ್ರೋತ್ಸಾಹವನ್ನೂ ಮರೆಯದೆ ನೆನಪಿಸುತ್ತಾರೆ. ದೆಹಲಿ ರಾಷ್ಟ್ರಪತಿ ಭವನ, ದುಬೈ, ಬೆಹರಿನ್, ಅಬುದಾಭಿ ಮೊದಲಾದೆಡೆ ಪ್ರದರ್ಶನಗಳಲ್ಲಿ ಭಾಗವಹಿಸಿದ್ದಾರೆ. ಕರ್ಗಲ್ಲು ಯಕ್ಷರೂಪಕ ತಂಡದಲ್ಲಿ ಒಂದು ವರ್ಷ, ಮುಳಿಯಾಲ ಭೀಮ ಭಟ್ಟರ ತಂಡದಲ್ಲಿ 10 ವರ್ಷ, ಪ್ರಸ್ತುತ 25 ವರ್ಷಗಳಿಂದ ನಿಡ್ಲೆ ಮಹಾಗಣಪತಿ ಯಕ್ಷಗಾನ ಮಂಡಳಿಯ ಮಳೆಗಾಲದ ಕಾರ್ಯಕ್ರಮಗಳಲ್ಲಿ ಗಂಗಾಧರ ಅವರು ಭಾಗವಹಿಸಿರುತ್ತಾರೆ.
ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಇವರನ್ನು ಡಾ| ವೀರೇಂದ್ರ ಹೆಗಡೆಯವರು ಸನ್ಮಾನಿಸಿದ್ದಾರೆ. ಅಲ್ಲದೆ ಅನೇಕ ಸಂಘ-ಸಂಸ್ಥೆಗಳಿಂದ ಗಂಗಾಧರ ಅವರು ಗೌರವಿಸಲ್ಪಟ್ಟಿದ್ದಾರೆ. ಸಾಂಸಾರಿಕವಾಗಿಯೂ ಇವರು ತೃಪ್ತರು. ಮಡದಿ ಬಿ. ಕುಶಾಲಾಕ್ಷಿ ಜೋಗಿ. ಇವರು ಸರಕಾರೀ ಆಸ್ಪತ್ರೆಯಲ್ಲಿ ಉದ್ಯೋಗಿ. ಪುತ್ರ ಜ್ಞಾನೇಶ ಇಂಜಿನಿಯರಿಂಗ್ ವಿದ್ಯಾರ್ಥಿ. ಶ್ರೀ ಪುತ್ತೂರು ಗಂಗಾಧರ ಜೋಗಿಯವರಿಗೆ ಸಕಲ ಸನ್ಮಂಗಲಗಳನ್ನು ದೇವರು ಅನುಗ್ರಹಿಸಲಿ. ಕಲಾಮಾತೆಯ ಸೇವೆಯನ್ನು ಇನ್ನಷ್ಟು ಮಾಡುವ ಭಾಗ್ಯವನ್ನು ಕರುಣಿಸಲಿ. ಇನ್ನೂ ಗೌರವ, ಸನ್ಮಾನಗಳು ಸಿಗುವಂತಾಗಲಿ ಎಂಬ ಹಾರೈಕೆಗಳು.ು

Comments
Post a Comment