Posts

ಅನುಭವಿ ಸಹೃದಯಿ ಭಾಗವತ ಶ್ರೀನಿವಾಸ ಬಳ್ಳಮಂಜ

Image
  ಫೋಟೋ ಕೃಪೆ: ಶ್ರೀ ಮಧುಸೂದನ ಅಲೆವೂರಾಯ  ಶ್ರೀ ಶ್ರೀನಿವಾಸ ಬಳ್ಳಮಂಜ ಅವರು ಕಟೀಲು ಮೇಳದ ಭಾಗವತರು. ಪ್ರಸ್ತುತ ಕಟೀಲು ನಾಲ್ಕನೇ ಮೇಳದಲ್ಲಿ ಪ್ರಧಾನ ಭಾಗವತರಾಗಿ ಕಲಾಸೇವೆಯನ್ನು ಮಾಡುತ್ತಿದ್ದಾರೆ. ಯಕ್ಷಗಾನದಲ್ಲಿ ಭಾಗವತ ಸ್ಥಾನದ ಹೊಣೆಗಾರಿಕೆಯು ವಿಶಾಲವಾದುದು. ನಾಲ್ಕಾರು ಪದ್ಯಗಳನ್ನು ಹೇಳಿದವರು ಭಾಗವತರಾಗಲಾರರು. ಯಶಸ್ವಿ ಪ್ರದರ್ಶನಕ್ಕೆ ಬೇಕಾದ ಅಂಶಗಳನ್ನೆಲ್ಲಾ ಅವನು ತಿಳಿದಿರಬೇಕು. ತೆಂಕು ತಿಟ್ಟಿನ ಹಿರಿಯ ಭಾಗವತರಾದ ಕುರಿಯ ಶ್ರೀ ಗಣಪತಿ ಶಾಸ್ತ್ರಿಗಳು ಪ್ರದರ್ಶನ ಮುಗಿದ ಮೇಲೆ ಆಟ ಹೇಗಾಗಿದೆ? ಎಂದು ಕೇಳುತ್ತಿದ್ದರು. ಪ್ರದರ್ಶನವು ಚೆನ್ನಾಗಿರಬೇಕೆಂಬ ತುಡಿತವು ಅವರಿಗಿತ್ತು. ಕಲಾವಿದರು ನಿಮ್ಮ ಪದ್ಯ ಚೆನ್ನಾಗಿತ್ತು ಎಂದು ಹೇಳಿದರೆ, 'ನೀವು ಚೆನ್ನಾಗಿ ದುಡಿದಿರಿ,ಆದ ಕಾರಣ ನನ್ನ ಪದ್ಯ ಒಳ್ಳೆಯದಾಯಿತು" ಎಂದು ಹೇಳುತ್ತಿದ್ದರು. ಯಕ್ಷಗಾನವು ಸ್ವಪ್ರತಿಷ್ಠೆಗಾಗಿ ಇರುವ ವೇದಿಕೆಯಲ್ಲ, ಕಲಾವಿದರು ತಂಡವಾಗಿ ಮುನ್ನಡೆದು ಪ್ರದರ್ಶನದ ಗೆಲುವಿಗೆ ಕಾರಣರಾಗಬೇಕು ಎಂಬ ಸಂದೇಶವು ಇದರಲ್ಲಿದೆ. "ಭಾಗವತನು ಯಶಸ್ವೀ ಪ್ರದರ್ಶನದ ಶ್ರೇಯಸ್ಸನ್ನು ಪಡೆಯುವುದರ ಜತೆಗೆ ಸೋಲಿನ ಹೊಣೆಯನ್ನೂ ಹೊರಬೇಕು. ಸೋಲಿಗಾಗಿ ಮತ್ತೊಬ್ಬರ ಕಡೆಗೆ ಬೆರಳು ತೋರಿಸಬಾರದು'' ಇದು ಉಭಯ ತಿಟ್ಟುಗಳ ಖ್ಯಾತ ಭಾಗವತ ಕೀರ್ತಿಶೇಷ ಕಡತೋಕಾ ಮಂಜುನಾಥ ಭಾಗವತರ ಮಾತುಗಳು. ಇದರಿಂದ ಯಕ್ಷಗಾನದಲ್ಲಿ ಭಾಗವತನ ಸ್ಥಾನ, ಹೊಣೆಗಳೇನು ಎಂಬುದನ್ನು ಅರ್ಥ ಮಾಡ...

ಅನುಭವಿ ಕಲಾವಿದ ಶ್ರೀ ಮೋಹನ ಶೆಟ್ಟಿ ಬಾಯಾರು

Image
ಯಕ್ಷಗಾನವು ಶ್ರೇಷ್ಠ ಕಲೆ ಎಂಬ ಅರ್ಥದಲ್ಲಿ 'ಗಂಡುಕಲೆ' ಎಂದೇ ಪ್ರಸಿದ್ಧವಾಗಿದೆ. ಕಾಸರಗೋಡು, ,ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡ ಪ್ರದೇಶದಲ್ಲಿ ವಾಸಿಸುವ ಜನರಿಗೆ ಯಕ್ಷಗಾನದಿಂದ ದೂರವಾಗಿ ಬದುಕಲು ಸಾಧ್ಯವಿಲ್ಲ. ಈ  ಅನುಪಮವಾದ ಕಲೆಯ ಹೊರತಾದ ಬದುಕನ್ನು ಈ ಪ್ರದೇಶದ ಜನರಿಗೆ ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ಜೀವನವು ಯಕ್ಷಗಾನ ಕಲೆಯೊಂದಿಗೆ ಜತೆಯಾಗಿ ಮುನ್ನಡೆಯುತ್ತದೆ. ಎಲ್ಲಾ ಮನೆಗಳಲ್ಲೂ ಕಲಾವಿದರೋ, ಕಲಾಭಿಮಾನಿಗಳೋ ಇದ್ದೇ ಇರುತ್ತಾರೆ. ಇದು ನಮ್ಮ ಊರಿನ ಕಲೆ. ನಾವು ಈ ಶ್ರೇಷ್ಠ ಕಲೆಯ ಒಂದು ಅಂಗವಾಗಿ ಇದ್ದೇವೆ ಎಂದು ಹೆಮ್ಮೆಯಿಂದ, ಸಂತಸದಿಂದ ಹೇಳಿಕೊಳ್ಳುತ್ತಾರೆ. ಯಕ್ಷಗಾನ ಕಲಾವಿದನಾಗಬೇಕೆಂದು ಆಸೆ ಇರುವವರಿಗೆ ಅವರವರ ಅಭಿರುಚಿಗೆ ತಕ್ಕಂತೆ ಆಯ್ಕೆಗೆ ಅವಕಾಶಗಳಿವೆ. ಜೇನು, ಮೊಸರು, ಬೆಲ್ಲ, ಸಕ್ಕರೆ, ದ್ರಾಕ್ಷಿ ಮೊದಲಾದ ವಸ್ತುಗಳೆಲ್ಲಾ ಸವಿಯಾಗಿಯೇ ಇರುತ್ತದೆ. ಎಲ್ಲರೂ ಎಲ್ಲವನ್ನೂ ಇಷ್ಟ ಪಡಲಾರರು. ಯಾರ ಮನಸ್ಸಿಗೆ ಯಾವುದು ಮೆಚ್ಚುಗೆಯೋ ಅದೇ ಅವನಿಗೆ ಸವಿಯಾಗಿರುತ್ತದೆ. ರಂಗವೇರುವ ಅಭ್ಯಾಸಿಗಳಿಗೆ ಭಾಗವತನಾಗಬೇಕು, ಮದ್ದಳೆಗಾರನಾಗಬೇಕು, ಪುಂಡುವೇಷಧಾರಿಯಾಗಬೇಕು, ಸ್ತ್ರೀ ಪಾತ್ರಧಾರಿಯಾಗಬೇಕು ಹೀಗೆಂಬ ಗುರಿಯಿರುತ್ತದೆ. ಬೇಕಾದಂತೆ ಆಯ್ಕೆ ಮಾಡಿಕೊಂಡು ಮುಂದುವರಿಯುತ್ತಾರೆ. ಹೀಗೆ ತೊಡಗಿಸಿಕೊಂಡು ಅನುಭವಗಳಿಂದ ಪಕ್ವರಾದ ಹಿರಿಯ ಕಲಾವಿದರಲ್ಲಿ ಒಬ್ಬರು ಶ್ರೀ ಮೋಹನ ಶೆಟ್ಟಿ ಬಾಯಾರು. ಇವರು ಪ್ರಸ್ತುತ ಕಟೀಲು ಶ್ರೀ ದು...

ಅನುಭವಿ ಬಣ್ಣದ ವೇಷಧಾರಿ - ಶ್ರೀ ಶಶಿಧರ ಶೆಟ್ಟಿ ಪಂಜ ಕೊಯಿಕುಡೆ

Image
  ತೆಂಕುತಿಟ್ಟು ಯಕ್ಷಗಾನದಲ್ಲಿ ಬಣ್ಣದ ವೇಷಗಳಿಗೆ ವಿಶೇಷ ಸ್ಥಾನ, ಗೌರವಗಳ ಜತೆ ಪ್ರದರ್ಶಿಸುವಲ್ಲಿ ತನ್ನದೇ ಆದ ರೀತಿ, ನಿಯಮಗಳೂ ಇವೆ. ಇದು ವೇಗದ ಯುಗ. ಪ್ರಸ್ತುತ ಬದಲಾದ ಸನ್ನಿವೇಶದಲ್ಲಿ ಬಣ್ಣದ ವೇಷಗಳಿಗೆ ಅವಕಾಶ, ಪ್ರೋತ್ಸಾಹಗಳು ಸರಿಯಾಗಿ ದೊರಕುತ್ತಿಲ್ಲ ಎಂಬ ಮಾತು ಕೇಳಿ ಬಂದರೆ ಅದು ತಪ್ಪಾಗದು. ಹಾಗಾಬಾರದು. ಯಕ್ಷಗಾನದಲ್ಲಿ ಬಣ್ಣ ಎಂಬ ವಿಭಾಗವು ಬಲಿಷ್ಠವಾಗಿಯೇ ಇರಬೇಕು. ಅದು ಸೊರಗಲೇ ಬಾರದು. ಸೊರಗಿದರೆ ಯಕ್ಷಗಾನದ ಸೌಂದರ್ಯವೂ ನಷ್ಟವಾಗುವುದೆಂದು ನಮಗೆಲ್ಲರಿಗೂ ತಿಳಿದಿದೆ. ಖಂಡಿತವಾಗಿಯೂ ಬಣ್ಣದ ವೇಷಗಳಿಗೆ ಬೇಕಾದಷ್ಟು ಸಮಯ ಅವಕಾಶಗಳು ಮುಂದಿನ ದಿನಗಳಲ್ಲಿ ಸಿಗಲಿ. ಯಕ್ಷಗಾನದಲ್ಲಿ ಆ ವಿಭಾಗವು ವಿಜೃಂಭಿಸಲಿ ಎಂದು ಹಾರೈಸೋಣ. ಇಂದು ತೆಂಕುತಿಟ್ಟು ಯಕ್ಷಗಾನದಲ್ಲಿ ಅನೇಕ ಕಲಾವಿದರು ಬಣ್ಣದ ವೇಷಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಿಜ ಬದುಕಿನಲ್ಲಿ ಸಾತ್ವಿಕರಾದರೂ ರಂಗದಲ್ಲಿ ಅಸುರರಾಗಿ ಅಬ್ಬರಿಸುತ್ತಿದ್ದಾರೆ. ಇದುವೇ ಪರಕಾಯ ಪ್ರವೇಶ. ಪಾತ್ರಗಳನ್ನು ಕಟ್ಟಿಕೊಡುವ ರೀತಿ. ಪಾತ್ರಗಳ ಸ್ವಭಾವಗಳನ್ನು ಅರಿತು ಅಭಿನಯಿಸುವ ಕಲೆಯು. ಹಿರಿಯ ಕಲಾವಿದರ ಜತೆಗೆ ಉದಯೋನ್ಮುಖ ಬಣ್ಣದ ವೇಷಧಾರಿಗಳೂ ಬೆಳೆದು ಅನುಭವಗಳನ್ನು ಗಳಿಸಿಕೊಳ್ಳುತ್ತಿದ್ದಾರೆ. ಶ್ರೀ ಶಶಿಧರ ಶೆಟ್ಟಿ ಪಂಜ, ಕೊಯಿಕುಡೆ ಅವರು ಕಟೀಲು ಮೇಳದ ಅನುಭವಿ ಬಣ್ಣದ ವೇಷಧಾರಿ. ಕಳೆದ ಮೂವತ್ತು ವರ್ಷಗಳಿಂದ ಕಟೀಲು ಮೇಳದಲ್ಲಿ ವ್ಯವಸಾಯ ಮಾಡುತ್ತಿದ್ದಾರೆ. ಶ್ರೀ ಶಶಿಧರ ಶೆಟ್...

ಅನುಭವಿ ಹಿರಿಯ ಕಲಾವಿದ ಬಾಯಾರು ಶ್ರೀ ರಘುನಾಥ ಶೆಟ್ಟಿ

Image
  ಯಾವುದೇ ಕ್ಷೇತ್ರದಲ್ಲಿ ಹಿರಿಯ ಅನುಭವಿಗಳು ಜತೆಗಿದ್ದರೆ ಕಿರಿಯರಿಗೆ, ಅಭ್ಯಾಸಿಗಳಿಗೆ ಅದರಿಂದ ಅನುಕೂಲವಾಗುತ್ತದೆ. ಹಿರಿಯರ ಅನುಭವ,ವಿದ್ಯೆಗಳನ್ನು ಪಡೆದು ಕಲಿಕಾಸಕ್ತರು ಮುನ್ನಡೆಯಲು ಅವಕಾಶವಾಗುತ್ತದೆ. ಅಧ್ಯಯನಕ್ಕೆ, ಮಾಹಿತಿ ಸಂಗ್ರಹಕ್ಕೆ, ಮುನ್ನಡೆಸುವುದಕ್ಕೆ ಹಿರಿಯ ಅನುಭವಿಗಳ ಉಪಸ್ಥಿತಿಯು ಇರಲೇಬೇಕು. ಯಕ್ಷಗಾನ ಕಲಾ ಕ್ಷೇತ್ರದಲ್ಲಿ ಇಂದು ಅನೇಕ ಹಿರಿಯ ಅನುಭವಿ ಕಲಾವಿದರು ವ್ಯವಸಾಯ ಮಾಡುತ್ತಿದ್ದಾರೆ. ಶ್ರೀ ರಘುನಾಥ ಶೆಟ್ಟಿ ಬಾಯಾರು ಅವರು ತೆಂಕುತಿಟ್ಟಿನ ಹಿರಿಯ ಅನುಭವಿ ಕಲಾವಿದರು. ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಕಲಾವಿದರು. 1964ರಿಂದ ಯಕ್ಷಗಾನ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ.  ಅನುಭವೀ ಕಲಾವಿದ ಶ್ರೀ ರಘುನಾಥ ಶೆಟ್ಟರ ಹುಟ್ಟೂರು ಕಾಸರಗೋಡು ಜಿಲ್ಲೆಯ ಬಾಯಾರು ಸಮೀಪದ ಕುಳ್ಯಾರು. 1950 ಜೂನ್ 6ರಂದು ಪೈವಳಿಕೆ ಶ್ರೀ ಐತಪ್ಪ ಶೆಟ್ಟಿ ಮತ್ತು ಶ್ರೀಮತಿ ಕಲ್ಯಾಣಿ ಶೆಟ್ಟಿ ದಂಪತಿಗಳ ಹಿರಿಯ ಮಗನಾಗಿ ಜನನ. ಪೈವಳಿಕೆ ಶ್ರೀ ಐತಪ್ಪ ಶೆಟ್ಟರನ್ನು ಕಲಾಭಿಮಾನಿಗಳೆಲ್ಲರೂ ತಿಳಿದಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಖ್ಯಾತ ಸ್ತ್ರೀ ವೇಷಧಾರಿಯಾಗಿ ಮೆರೆದವರು. ಜಾಹೀರಾತು  ರಘುನಾಥ ಶೆಟ್ಟಿ ಬಾಯಾರು ಅವರು ಓದಿದ್ದು 6ನೇ ತರಗತಿ ವರೆಗೆ. ಬಾಯಾರು ಹೆದ್ದಾರಿ ಶಾಲೆಯಲ್ಲಿ. ಎಳವೆಯಲ್ಲಿ ಯಕ್ಷಗಾನಾಸಕ್ತಿ ಇತ್ತು. ತೀರ್ಥರೂಪರ ಜತೆ ತೆರಳಿ ಯಕ್ಷಗಾನ ಪ್ರದರ್ಶನಗಳನ್ನು ...

ಹಿರಿಯ ಕಲಾವಿದ ಶ್ರೀ ಪಡ್ರೆ ಕುಮಾರ

Image
ಶ್ರೀ ಪಡ್ರೆ ಕುಮಾರ ಇವರು ಪ್ರಸ್ತುತ ಕಟೀಲು ಮೇಳದ ಕಲಾವಿದರಾಗಿ ವ್ಯವಸಾಯ ಮಾಡುತ್ತಿದ್ದಾರೆ. ತೆಂಕುತಿಟ್ಟಿನ, ಕಟೀಲು ಮೇಳದ ಹಿರಿಯ ವೇಷಧಾರಿ. ಇವರೊಬ್ಬ ಸವ್ಯಸಾಚಿ ಕಲಾವಿದ. ಯಾವ ವೇಷವನ್ನೂ ಮಾಡಬಲ್ಲರು. ಇವರು ಶ್ರೀ ಪಡ್ರೆ ಚಂದು ಅವರ ಪುತ್ರ. ಶ್ರೀ ಪಡ್ರೆ ಚಂದು ಅವರನ್ನು ಕಲಾಭಿಮಾನಿಗಳೆಲ್ಲರೂ ಬಲ್ಲರು.  ಶ್ರೀ ಪಡ್ರೆ ಚಂದು ಅವರ ಪುತ್ರ ಶ್ರೀ ಪಡ್ರೆ ಕುಮಾರ ಅವರು ಕಳೆದ 57 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ವ್ಯವಸಾಯ ಮಾಡುತ್ತಿದ್ದಾರೆ. ಸರಳ, ಸಜ್ಜನ, ವಿನಯವಂತ ಹಿರಿಯ ಕಲಾವಿದ. ಪಡ್ರೆ ಕುಮಾರ ಅವರು ಬಂಟ್ವಾಳ ತಾಲೂಕು ವಿಟ್ಲಪಡ್ನೂರು ಗ್ರಾಮದ ಕೊಡುಂಗಾಯಿ ಸಮೀಪದ ನಡ್ಯಾಳ ಎಂಬಲ್ಲಿ ಶ್ರೀ ಪಡ್ರೆ ಚಂದು ಮತ್ತು ಭಾಗೀರಥಿ ದಂಪತಿಗಳ ಹಿರಿಯ ಮಗನಾಗಿ 1947ನೇ ಇಸವಿಯಂದು ಜನಿಸಿದರು. ಪಡ್ರೆ ಕುಮಾರ ಅವರು ಓದಿದ್ದು 5ನೇ ತರಗತಿ ವರೆಗೆ. ಕೊಡುಂಗಾಯಿ ಶಾಲೆಯಲ್ಲಿ. ತೀರ್ಥರೂಪರು  ಕಲಾವಿದರಾಗಿದ್ದ ಕಾರಣ ಸಹಜವಾಗಿ ಯಕ್ಷಗಾನಾಸಕ್ತಿ ಇತ್ತು. ಆಟಗಳನ್ನು ನೋಡುತ್ತಿದ್ದರು. ಹಗಲು ಗೆಳೆಯರ ಜತೆ ಅಣಕು ಪ್ರದರ್ಶನಗಳೂ ನಡೆಯುತ್ತಿತ್ತು. ಅಡಿಕೆ ಮರದ ಹಾಳೆಗಳನ್ನು ಕತ್ತರಿಸಿ ಕತ್ತಿ ಮತ್ತು ಕಿರೀಟಗಳನ್ನು ಸಿದ್ಧಪಡಿಸಿ ಕುಣಿಯುತ್ತಿದ್ದರು. ಗುಡ್ಡ, ಗದ್ದೆ, ಮನೆಯಂಗಳಗಳೇ ವೇದಿಕೆಯಾಗುತ್ತಿತ್ತು. ಪಡ್ರೆ ಚಂದು ಅವರು ಆಗ ಕುಂಡಾವು ಮೇಳದಲ್ಲಿದ್ದರು. ಮನೆಯಲ್ಲಿಯೇ ಇತರ ಕಲಾವಿದರಿಗೆ ಚಂದು ಅವರು ನಾಟ್ಯ ಕಲಿಸುತ್ತಿದ್ದಾಗ ಕುಮಾರ ಅವರು ನೋಡುತ...

ಪುರಾಣ, ತುಳು ಪ್ರಸಂಗಗಳ ಅನುಭವಿ ಶ್ರೀ ಗುಡ್ಡಪ್ಪ ಸುವರ್ಣ ಪಂಜ

Image
ಶ್ರೀ ಗುಡ್ಡಪ್ಪ ಸುವರ್ಣ ಪಂಜ ಇವರು ತೆಂಕುತಿಟ್ಟಿನ ಹಿರಿಯ ಅನುಭವಿ ಕಲಾವಿದರು. ಪುರಾಣ ಮತ್ತು ತುಳು ಪ್ರಸಂಗಗಳಲ್ಲಿ ಪಾತ್ರಗಳನ್ನು ನಿರ್ವಹಿಸಿ ಕಲಾಭಿಮಾನಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇವರು ಲೇಖಕರೂ ಆಗಿ ಸಾಹಿತ್ಯಸೇವೆಯನ್ನು ಕಲಾಸೇವೆಯ ಜತೆ ಮಾಡಿಕೊಂಡು ಬಂದವರು. ಹಲವು ಭಕ್ತಿ ಗೀತೆಗಳನ್ನೂ ಹದಿನೈದು ಪ್ರಸಂಗಗಳನ್ನೂ ರಚಿಸಿರುತ್ತಾರೆ. ಅಲ್ಲದೆ ಸುಮಾರು ಇಪ್ಪತ್ತೈದು ಪ್ರಸಂಗಗಳಿಗೆ ಪದ್ಯ ರಚನೆಯನ್ನೂ ಮಾಡಿರುತ್ತಾರೆ. ಕಳೆದ ನಲುವತ್ತು ವರ್ಷಗಳಿಂದ ಯಕ್ಷಗಾನ ಕಲಾವಿದರಾಗಿ ಕಲಾ ಮಾತೆಯ ಸೇವೆಯನ್ನು ಮಾಡುತ್ತಿದ್ದಾರೆ. ಹಿರಿಯ ಅನುಭವಿ ಕಲಾವಿದ ಶ್ರೀ ಗುಡ್ಡಪ್ಪ ಸುವರ್ಣರ ಹುಟ್ಟೂರು ಸುಳ್ಯ ತಾಲೂಕಿನ ಪಂಜ. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸಮೀಪದ ಊರು ಪಂಜ. 1967 ಜನವರಿ 27ರಂದು ಶ್ರೀ ಚೋಮಣ್ಣ ಪೂಜಾರಿ ಮತ್ತು ಶ್ರೀಮತಿ ವಾಸಮ್ಮ ದಂಪತಿಗಳ ಪುತ್ರನಾಗಿ ಜನನ. ಗುಡ್ಡಪ್ಪ ಸುವರ್ಣರ ತಾಯಿಯ ತಂದೆ ಶ್ರೀ ಮಂಜಪ್ಪ ಪೂಜಾರಿ ಅವರು ಯಕ್ಷಗಾನ ಕಲಾವಿದರಾಗಿದ್ದರು. ಶ್ರೀ ಗುಡ್ಡಪ್ಪ ಸುವರ್ಣರಿಗೆ ಬಾಲ್ಯದಲ್ಲೇ ಯಕ್ಷಗಾನ ಆಸಕ್ತಿ ಇತ್ತು. ಪ್ರದರ್ಶನಗಳನ್ನು ಬಿಡದೆ ನೋಡಿ ಆನಂದಿಸುತ್ತಿದ್ದರು. ಓದಿದ್ದು ಐದನೇ ತರಗತಿ ವರೆಗೆ. ಪಂಜ ಸಮೀಪದ ಪಂಬೆತ್ತಾಡಿ ಶಾಲೆಯಲ್ಲಿ. ಕಲಾವಿದನಾಗಬೇಕೆಂಬ ಆಸೆಯಿಂದ ಯಕ್ಷಗಾನ ನಾಟ್ಯ ಕಲಿಯಲು ತೀರ್ಮಾನಿಸಿದ್ದರು. ಕಲ್ಮಡ್ಕ ಸಂಗಮ ಕಲಾ ಸಂಘದ ರೂವಾರಿಗಳಾದ ಕೆರೆಕೋಡಿ ಪಂಡಿತ ಗಣಪತಿ ಭಟ್ಟರ ಪ್ರೋತ್ಸಾಹದಲ್ಲಿ...

ಅನುಭವಿ ಪುಂಡುವೇಷಧಾರಿ - ಶ್ರೀ ರತ್ನಾಕರ ಹೆಗ್ಡೆ ಪುತ್ತೂರು

Image
ತೆಂಕುತಿಟ್ಟು ಯಕ್ಷಗಾನದಲ್ಲಿ ಇಂದು ಅನೇಕ ಪುಂಡುವೇಷಧಾರಿಗಳು ಕಲಾ ಸೇವೆಯನ್ನು ಮಾಡುತ್ತಿದ್ದಾರೆ. ಪ್ರವೇಶ, ಗಿರಕಿ, ಹುಡಿನಾಟ್ಯ, ಯುದ್ಧದ ಕ್ರಮಗಳು, ಜಲಕೇಳಿ, ವನವಿಹಾರ, ಯುದ್ಧರೀತಿಗಳು ಮೊದಲಾದ ಸಂದರ್ಭಗಳಲ್ಲಿ ಅಭಿನಯಿಸುತ್ತಾ ಇವರು ಪ್ರೇಕ್ಷಕರ ಮನವನ್ನು ಬೇಗನೆ ಸೂರೆಗೊಳ್ಳುತ್ತಾರೆ. ಪ್ರೇಕ್ಷಕರ ಮನವನ್ನು ಗೆಲ್ಲಲು ಈ ವಿಭಾಗದಲ್ಲಿ ಅವಕಾಶಗಳು ಧಾರಾಳವಾಗಿ ದೊರೆಯುತ್ತವೆ. ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಅದು ಪಾತ್ರೋಚಿತವಾಗಿಯೇ ಇರಬೇಕೆಂಬ ಎಚ್ಚರಿಕೆಯು ಇದ್ದಾಗ ಪಾತ್ರದ ಜತೆ ಪಾತ್ರವನ್ನು ಧರಿಸಿದ ಕಲಾವಿದನೂ ಗೆಲ್ಲುತ್ತಾ ಸಾಗುತ್ತಾನೆ. ಮುಂದು ಅವನೊಬ್ಬ ಶ್ರೇಷ್ಠ ಪುಂಡು ವೇಷಧಾರಿಯೇ ಆಗುತ್ತಾನೆ. ಹೀಗೆ ಸಾಗಿ ಬಂದ ಪುಂಡು ವೇಷಧಾರಿಗಳಲ್ಲೊಬ್ಬರು ಪುತ್ತೂರು ಶ್ರೀ ರತ್ನಾಕರ ಹೆಗ್ಡೆ ಅವರು. ಇವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಕಲಾವಿದರು. ಶ್ರೀ ರತ್ನಾಕರ ಹೆಗ್ಡೆ ಅವರ ಮೂಲಮನೆ ಪುತ್ತೂರು ಸಮೀಪದ ಬಪ್ಪಳಿಗೆ. ಶ್ರೀ ಕರುಣಾಕರ ಹೆಗ್ಡೆ ಮತ್ತು ಶ್ರೀಮತಿ ಸುಲೋಚನಾ ದಂಪತಿಗಳ ಪುತ್ರನಾಗಿ ಮಂಗಳೂರಿನಲ್ಲಿ 1966, ಜೂನ್ 28ರಂದು ಜನನ. ಕರುಣಾಕರ ಹೆಗ್ಡೆ ಅವರ ಎಂಟು ಮಂದಿ ಮಕ್ಕಳಲ್ಲಿ (ಐದು ಗಂಡು ಮತ್ತು ಮೂರು ಹೆಣ್ಣು) ರತ್ನಾಕರ ಹೆಗ್ಡೆ ಕಿರಿಯವರು. ಕರುಣಾಕರ ಹೆಗ್ಡೆ ಅವರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮೂವತ್ತೈದು ವರ್ಷಗಳ ಸೇವೆ ಸಲ್ಲಿಸಿದವರು.(ಮಂಗಳೂರು). ಇವರು ಯಕ್ಷಗಾನ ಹಿಮ್ಮೇಳ ಮುಮ್ಮೇ...